ಸಿ ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ: ಸಾರ್ವಜನಿಕರಿಗೆ ತೊಂದರೆ ಆರೋಪದಡಿ ಬಿಜೆಪಿಗರ ವಿರುದ್ಧ ಎಫ್​ಐಆರ್

Date:

ಮಾಜಿ ಸಚಿವ, ಎಂಎಲ್​ಸಿ ಸಿ ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ‌ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.

ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್‌ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಮಧ್ಯಾಹ್ನ ವಿಧಾನ ಪರಿಷತ್​ ಗದ್ದಲದಿಂದ ಕೂಡಿತ್ತು. ಆಡಳಿತ ಮತ್ತು ವಿರೋಧ ಪಕ್ಷದವರ ನಡುವೆ ವಾಗ್ಯುದ್ಧ ನಡೆದಿತ್ತು. ವಾಗ್ವಾದದ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ​ ಎಂಎಲ್​ಸಿ ಸಿ ಟಿ ರವಿ ಅವರಿಗೆ ಕೊಲೆಗಾರ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿ ಟಿ ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಅದೇ ದಿನ ಸಂಜೆ 6 ಗಂಟೆ ಸುಮಾರಿಗೆ ಸಿಟಿ ರವಿಯವರನ್ನು ಬಂಧಿಸಿದ್ದರು.

ಸಿ ಟಿ ರವಿ ಬಂಧನ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ದಿಢೀರ್​ ಪ್ರತಿಭಟನೆ ನಡೆಸಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆ ಮತ್ತು ಸಾರ್ವಜನಿಕ ಶಾಂತಿ ಭಂಗವಾಗಿದೆ ಎಂದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಸದ್ಯ ಸಿ ಟಿ ರವಿ ಅವರಿಗೆ ಹೈಕೋರ್ಟ್​ ಬಿಡುಗಡೆಗೆ ಆದೇಶಿಸಿದೆ. ಸಿ ಟಿ ರವಿಯವರನ್ನು ಬಂಧಿಸಿ ಬೆಂಗಳೂರಿಗೆ ಕಾರಿನಲ್ಲಿ ಕರೆದುಕೊಂಡು ಬರುತ್ತಿರುವಾಗಲೇ, ಹೈಕೋರ್ಟ್​ ಆದೇಶ ಹೊರಬಿದ್ದಿತ್ತು. ಸಿ ಟಿ ರವಿಯವರ ಬಂಧನ ವಿರೋಧಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chikkamagaluru
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...