ನನ್ನನ್ನು ಉರಿಗೌಡ ಎಂದಿರುವುದಕ್ಕೆ ಹೆಮ್ಮೆ ಇದೆ; ಸತ್ಯ ಪ್ರತಿಪಾದನೆ ಮಾಡಿದ್ದೇನೆ ಎಂದ ಸಿ ಟಿ ರವಿ

Date:

  • ನಾನು ಅಂದು ಇದ್ದಿದ್ದರೆ ಮಂತಾಂಧನ ವಿರುದ್ಧ ಕತ್ತಿ ಎತ್ತುತ್ತಿದ್ದೆ
  • ಸತ್ಯ ಗೊತ್ತಿದ್ದರೂ, ಹೇಳಲಾರದೆ ಹೇಡಿಯಂತೆ ಬದುಕುತ್ತಿರಲಿಲ್ಲ

ಕಾಂಗ್ರೆಸ್ ನವರು ನನ್ನನ್ನು ಉರಿಗೌಡ ಎಂದು ಕರೆದಿರುವುದು ಖುಷಿ ಹಾಗೂ ಸಂತಸ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿಕೊಂಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ ಟಿ ರವಿ “ನಾನು ಟಿಪ್ಪುವಿನ ಕಾಲದಲ್ಲಿ ಇದ್ದಿದ್ದರೆ, ನಾನೇ ಉರಿಗೌಡ, ನಂಜೇಗೌಡ ತರ ನಿಲ್ಲುತ್ತಿದ್ದೆ. ಇತಿಹಾಸದಲ್ಲಿ ಮತಾಂಧನ ವಿರುದ್ಧ ಕತ್ತಿ ಎತ್ತಿದವನು ಎನಿಸಿಕೊಳ್ಳುತ್ತಿದ್ದೆ, ಹೇಡಿ ಆಗುತ್ತಿರಲಿಲ್ಲ” ಎಂದು ಸಿ ಟಿ ರವಿ ತಮ್ಮ ವಿರುದ್ಧದ ಟೀಕೆಯನ್ನು ಒಪ್ಪಿಕೊಂಡಿದ್ದಾರೆ.

ತಮ್ಮನ್ನು ಉರಿಗೌಡನೆಂದು ಟೀಕಿಸಿರುವ ಕಾಂಗ್ರೆಸ್ ಟ್ವಿಟ್‌ಗೆ ತಿರುಗೇಟು ನೀಡಿರುವ ರವಿ, ಹೌದು, ನಾವು ಅವರೇ. ನಮಗೆ ಅದು ಖುಷಿ ಮತ್ತು ಹೆಮ್ಮೆಇದೆ. ಗುಲಾಮಿ ಮಾನಸೀಕತೆಯಲ್ಲಿ ಬದುಕುವ ಜನರಿಗಿಂತ ಹಾಗೇ ಕರೆಸಿಕೊಳ್ಳುವುದು ಒಳ್ಳೆಯದು. ಇಂದು ಟಿಪ್ಪು ಇದ್ದಿದ್ದರೆ ಆಂಜನೇಯ ದೇವಸ್ಥಾನವನ್ನ ಮಸೀದಿ ಮಾಡಿರುತ್ತಿದ್ದರು. ಕೆಲವರು ಸತ್ಯ ಗೊತ್ತಿದ್ದರೂ ಹೇಡಿಗಳಂತೆ ಬದುಕಿರುತ್ತಿದ್ದರು ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರವಿ, ವೋಟಿನ ಆಸೆಗೆ ನಾವು ಸುಳ್ಳನ್ನು ಒಪ್ಪಿಕೊಳ್ಳಲು ತಯಾರಿಲ್ಲ, ನಾವು ಸತ್ಯವನ್ನು ಪ್ರತಿಪಾದನೆ ಮಾಡಿದ್ದೇವೆ. ಆದರೆ ಕೆಲವರು ಕಪಾಲೇಶ್ವರ ಬೆಟ್ಟವನ್ನು ಮತಾಂತರ ಮಾಡಲು ಹೊರಟಿದ್ದಾರೆ. ಇದೇ ನಮ್ಮ ದುರ್ದೈವ ಎಂದ ರವಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರನ್ನು ಕುಟುಕಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...