ಪಕ್ಷ ನೀಡುವ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ: ಸಿ.ಟಿ ರವಿ

Date:

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ತೆರವು ಗೊಳಿಸಿರುವ ಬಗ್ಗೆ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ, “ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು” ಎಂದಿದ್ದಾರೆ.

“ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ. ಭಾರತ್ ಮಾತಾ ಕಿ ಜೈ” ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಡಲಾಗಿತ್ತು

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಬಿಜೆಪಿ ತನ್ನ ಸಂಘಟನಾ ರಚನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕೇಂದ್ರ ತಂಡಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಶಾಸಕ ಸಿ.ಟಿ ರವಿ ಅವರನ್ನು ಹುದ್ದೆಯಿಂದ ಕೆಳಕ್ಕಿಳಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ ಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಒಬ್ಬನ ಚಾರಿತ್ರ್ಯ ಹರಣ ಮಾಡಲು ಪತ್ರಿಕೆಯೊಂದು ಸಾಕು: ಅಗರ ಜ್ಞಾನೇಂದ್ರ

ಬಿಜೆಪಿಯ ಕೇಂದ್ರ ಪದಾಧಿಕಾರಿಗಳ ತಂಡದಲ್ಲಿ ಸಮಗ್ರ ಬದಲಾವಣೆ ಮಾಡಲಾಗಿದ್ದು, 38 ನಾಯಕರನ್ನು ನಾನಾ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಿ.ಟಿ ರವಿ ಅವರ ಸ್ಥಾನಕ್ಕೆ ಮಧ್ಯಪ್ರದೇಶ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರನ್ನು ನೇಮಕ ಮಾಡಲಾಗಿತ್ತು.

13 ಉಪಾಧ್ಯಕ್ಷರು ಮತ್ತು 9 ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ನಡೆದಿದೆ. ವಸುಂಧರಾ ರಾಜೇ ಮತ್ತು ರಮಣ್ ಸಿಂಗ್ ಸೇರಿ ಒಟ್ಟು 38 ಪದಾಧಿಕಾರಿಗಳನ್ನು ನಾನಾ ಸ್ಥಾನಗಳಿಗೆ ನೇಮಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...