ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

Date:

ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಿ.ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಸಿ.ಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ” ಎಂದರು.

“ಸಭಾಪತಿ ಅವರು ತಮ್ಮ ಕೆಲಸ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಬೇಕು. ಸ್ಥಳ ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಭಾಪತಿಗಳು ಅನುಮತಿ ಇಲ್ಲದೆ ಸದನದ ಮಹಜರು ಮಾಡಲು ಸಾಧ್ಯವಿಲ್ಲ. ಪರಿಷತ್ತಿಗೆ ತನ್ನದೇ ಆದ ನಿಯಮಗಳಿದ್ದು, ಪೊಲೀಸರು ಆ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸಮರ್ಥ ಗೃಹ ಸಚಿವ ಎಂಬ ಪ್ರಲ್ಹಾದ್‌ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್ ತಿರುಗೇಟು ನೀಡಿದರು. ಪ್ರಲ್ಹಾದ್‌ ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ನಾನು ಜೋಶಿ ಅವರನ್ನು ಅಸಮರ್ಥ ಕೇಂದ್ರ ಸಚಿವ ಎಂದು ಹೇಳಬಹುದು‌. ಆದರೆ, ಅದು ಎಷ್ಟು ಸಮಂಜಸ? ಅವರ ಹೇಳಿಕೆಯೇ ಅವರನ್ನು ಅಸಮರ್ಥ ಸಚಿವ ಎನ್ನುವುದನ್ನು ಹೇಳುತ್ತಿದೆ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

ಹಳೇಹುಬ್ಬಳ್ಳಿ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು,”ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದೇರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

“ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗುತ್ತೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...