ದಲಿತ ಸಿಎಂ ವಿಚಾರದಲ್ಲಿ ಕಾಂಗ್ರೆಸ್‌ ಡೋಂಗಿತನ ನಿಲ್ಲಿಸಲಿ: ಬಿಜೆಪಿ ಕಿಡಿ

Date:

ಕರ್ನಾಟಕದಲ್ಲಿ ಈವರೆಗೂ ದಲಿತ ವ್ಯಕ್ತಿ ಮುಖ್ಯಮಂತ್ರಿ ಆಗಿಲ್ಲ. ಈ ವಿಷಯ ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಮುನ್ನೆಲೆಗೆ ಬಂದು ನಂತರ ಗೌಣವಾಗಿಬಿಡುತ್ತದೆ. ರಾಜ್ಯದಲ್ಲಿ ಅಧಿಕಾರ ನಡೆಸಿರುವ ಮೂರು ಪಕ್ಷಗಳು ಈವರೆಗೂ ದಲಿತ ವ್ಯಕ್ತಿಯನ್ನು ಸಿಎಂ ಮಾಡುವ ಬದ್ಧತೆ ತೋರಿಲ್ಲ. ಆದರೆ, ದಲಿತ ಸಿಎಂ ಹೆಸರಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಮಾತ್ರ ನಿಲ್ಲಿಸಿಲ್ಲ.

ಅದರ ಮುಂದುವರಿದ ಭಾಗವಾಗಿ ಈಗ ದಲಿತ ಸಿಎಂ ವಿಚಾರವಾಗಿ ಬಿಜೆಪಿಯು ಕಾಂಗ್ರೆಸ್‌ ಕಾಲೆಳೆದಿದೆ. “ಕಾಂಗ್ರೆಸ್‌ಗೆ ನಿಜಕ್ಕೂ ದಲಿತರ ಮೇಲೆ ಕಾಳಜಿ ಇದ್ದರೆ, ಇದೀಗ ಬಹುಮತದೊಂದಿಗೆ ಅವಕಾಶವೂ ಇದೆ, ದಲಿತ ನಾಯಕರೊಬ್ಬರನ್ನು ಸಿಎಂ ಮಾಡಿ, ಇಲ್ಲವೇ ಡೋಂಗಿತನ ನಿಲ್ಲಿಸಿ” ಎಂದು ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಕಾಂಗ್ರೆಸ್ ದಲಿತರ ಶ್ರೇಯೋಭಿವೃದ್ಧಿಯ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆಯಂತೆ. ಕಾಂಗ್ರೆಸ್ 6 ದಶಕಗಳ ಕಾಲ ದಲಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ಅವರ ಬದುಕನ್ನು ಕತ್ತಲಲ್ಲಿರಿಸಿತ್ತು. ಅವರ ಬದುಕಿಗೆ ‘ಹೊಸ ಬೆಳಕು’ ನೀಡಿದ್ದು ಬಿಜೆಪಿ” ಎಂದು ಸಮರ್ಥಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯ ಭಾರತದಲ್ಲಿ ಕಾಂಗ್ರೆಸ್ ದಲಿತರಿಗೆ ಮಾಡಿರುವ ಮಹಾಮೋಸಗಳು ಜಗಜ್ಜಾಹೀರಾಗಿವೆ” ಎಂದು ಹೇಳಿರುವ ಬಿಜೆಪಿ ಹಲವು ಘಟನೆಗಳನ್ನು ಪಟ್ಟಿ ಮಾಡಿದೆ.

“ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿ, ನಿರಂತರವಾಗಿ ಅವಮಾನಿಸಿದ್ದು ಕಾಂಗ್ರೆಸ್. ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ಡಾ. ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದೆ ಅವಮಾನ ಮಾಡುತ್ತಿರುವುದು ಕಾಂಗ್ರೆಸ್” ಎಂದು ಆರೋಪಿಸಿದೆ.

“ದಲಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸೌಜನ್ಯಕ್ಕೂ ಅಭಿನಂದನೆ ಸಲ್ಲಿಸದ ಕಾಂಗ್ರೆಸ್. ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿಯಿಟ್ಟಾಗ ಮತಾಂಧರ ಪರ ನಿಂತಿದ್ದು ಕಾಂಗ್ರೆಸ್. ದಲಿತ ಮಕ್ಕಳಿಗೆ ನೀಡುವ ಹಾಸಿಗೆ, ದಿಂಬು, ತಟ್ಟೆ, ಲೋಟಗಳಲ್ಲಿ ಸಹ ಭ್ರಷ್ಟಾಚಾರ ನಡೆಸಿ, ಮಕ್ಕಳಿಗೆ ತೊಂದರೆ ನೀಡಿದ್ದು ಕಾಂಗ್ರೆಸ್” ಎಂದು ದೂರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...