ಗದಗ | ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ ದಲಿತ ಐಕ್ಯತಾ ಹೋರಾಟ ಸಮಿತಿ

Date:

  • ಸುಳ್ಳು ಹೇಳಿ, ದಲಿತರ ಮತ ಕೇಳುತ್ತಿರುವ ಬಿಜೆಪಿ
  • ಸಂವಿಧಾನ ಗೆಲ್ಲಿಸಿ, ಮನುವಾದ ಸೋಲಿಸುವಂತೆ ಕರೆ

ಮುಂಬರುವ ಚುನಾವಣೆಯಲ್ಲಿ ಸಂವಿಧಾನ ಗೆಲ್ಲಬೇಕು, ಮನುವಾದ ಸೋಲಬೇಕು ಇದಕ್ಕಾಗಿ ‘ದಲಿತ ಐಕ್ಯತಾ ಹೋರಾಟ ಚಾಲನೆ ಸಮಿತಿ’ಯು ಸಂವಿಧಾನ ಪರವಾಗಿ ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದೆ.

ಗದಗ ಪಟ್ಟಣದಲ್ಲಿ ದಲಿತ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ಏರ್ಪಡಿಸಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಾಲರಾಜ್ ಅರಬರ್ ಮಾತನಾಡಿ, “ರಾಜ್ಯದಲ್ಲಿ ಬೆಲೆ ಏರಿಕೆ, ಸಂವಿಧಾನ ತಿದ್ದುಪಡಿ ಪ್ರಸ್ತಾಪ, ಖಾಸಗಿಕರಣ, ನಿರುದ್ಯೋಗ ಸಮಸ್ಯೆ, ಕೋಮುಗಲಭೆ, ಗಂಭೀರ ಸಮಸ್ಯೆಗಳ ಬಗ್ಗೆ ನಾವೆಲ್ಲರೂ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿ ಬಂದೊದಗಿದೆ”‌ ಎಂದು ಹೇಳಿದರು.

ದಲಿತ ಮುಖಂಡ ರಮೇಶ್ ಬಾಳಮ್ಮ ಮಾತನಾಡಿ, “ಸದಾಶಿವ ಆಯೋಗ ಸಂಪೂರ್ಣ ಜಾರಿಯಾಗದೆ ಇದ್ದರೂ, ಜಾರಿ ಮಾಡಿದ್ದೇವೆಂದು ಬಿಜೆಪಿಯವರು ಸುಳ್ಳ ಅಪಪ್ರಚಾರ ಮಾಡುತ್ತಿದ್ದಾರೆ. ದಲಿತರಿಗೆ ಶೋಷಿತ ಜನಾಂಗದವರಿಗೆ ಮೋಸ ಮಾಡುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ಮುಖಂಡ ವೆಂಕಟೇಶಯ್ಯ ಮಾತನಾಡಿ, “ಬಿಜೆಪಿ ನೇತೃತ್ವದ ಸರ್ಕಾರಗಳು ದಲಿತರ ಅಭಿವೃದ್ದಿ ಮಾಡಿದ್ದೇವೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ದಲಿತರ ಓಟು ಪಡೆಯುವಂತ ಹುನ್ನಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ದಲಿತರು, ಶೋಷಿತರು, ಅಲ್ಪಸಂಖ್ಯಾತರು ಬಿಜೆಪಿಯ ಪಕ್ಷಕ್ಕೆ ಮತ ನೀಡಕೂಡದು. ದಲಿತರಿಗೆ ಅಲ್ಪಸಂಖ್ಯಾತರಿಗೆ ಶೋಷಿತ ಜನಾಂಗದವರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸಂವಿಧಾನ ಪಾಲನೆಗಾಗಿ ಸಂವಿಧಾನ ಉಳಿಸುವುದಕ್ಕಾಗಿ ಸಂವಿಧಾನವನ್ನು ಅಪ್ಪಿಕೊಳ್ಳುವ ಪಕ್ಷ ಕಾಂಗ್ರೆಸ್ ಬೆಂಬಲಿಸೋಣ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ ಎಫ್ ವೈ ದೊಡ್ಮನಿ, ಪ್ರಕಾಶ್ ಕೆಲೂರು, ನಾಗರಾಜ್ ಗೋಕಾವಿ, ಮಾರುತಿ ಅಂಗಡಿ, ಹನುಮಂತ್ ದೊಡ್ಮನಿ, ಬಿಕೆ ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...