ದಾವಣಗೆರೆ | ಸಂಸದ ಜಿ.ಎಂ. ಸಿದ್ದೇಶ್ವರ್ ಒಂದು ರೀತಿ ಸದ್ದಾಂ ಹುಸೇನ್ ಇದ್ದಂತೆ: ರೇಣುಕಾಚಾರ್ಯ ವಾಗ್ದಾಳಿ

Date:

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಬಂಡಾಯದ ಬಿಸಿ ಏರತೊಡಗಿದೆ.

ಕೋಲಾರ, ಶಿವಮೊಗ್ಗ ಮಾತ್ರವಲ್ಲದೇ ದಾವಣಗೆರೆಯಲ್ಲೂ ಬಂಡಾಯದ ಬಿಸಿ ಎದ್ದಿದ್ದು, ಹಾಲಿ ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಲೋಕಸಭಾ ಟಿಕೆಟ್‌ ಪ್ರಕಟವಾಗುತ್ತಿದ್ದಂತೆ ಅಸಮಾಧಾನಗೊಂಡಿರುವ ಬಿಜೆಪಿ ಮುಖಂಡ. ಮಾಜಿ ಸಚಿವ ರೇಣುಕಾಚಾರ್ಯ ಮತ್ತವರ ಬೆಂಬಲಿಗರು, ಸಿದ್ದೇಶ್ವರ್‌ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಿದ್ದ ವೇಳೆ, ಸಂಸದ ಜಿ.ಎಂ. ಸಿದ್ದೇಶ್ವರ್ ಒಂದು ರೀತಿ ಸದ್ದಾಂ ಹುಸೇನ್ ಇದ್ದಂತೆ. ಕಳೆದ ಮೂರು ತಿಂಗಳಿನಿಂದ ದಾವಣಗೆರೆ ಕ್ಷೇತ್ರ ಅಭ್ಯರ್ಥಿ ಬದಲಾವಣೆ ಆಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರು. ಹಾಲಿ ಸಂಸದ ಸಿದ್ದೇಶ್ವರ ಅವರು ನನಗೆ ಅಲ್ಲದಿದ್ದರೂ ನನ್ನ ಕುಟುಂಬದವರಿಗೆ ಕೊಡಿ ಎಂದು ಒತ್ತಡ ಹಾಕಿದ್ದಾರೆ. ಹಾಗಾಗಿ, ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ನಾವು ಒಪ್ಪಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sidesh
ಜಿ.ಎಂ. ಸಿದ್ದೇಶ್ವರ್ ಹಾಗೂ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್

“ನಮಗೆ ಗಾಯತ್ರಿ ಸಿದ್ದೇಶ್ವರ್‌ ಅವರ ಬಗ್ಗೆ ಗೌರವವಿದೆ. ಆದರೆ, ಸಂಸದ ಸಿದ್ದೇಶ್ವರ್ ಅವರು 20 ವರ್ಷದಿಂದ ಏನೂ ಕೆಲಸ ಮಾಡಿಲ್ಲ. ಏನೂ ಅಭಿವೃದ್ಧಿಯಾಗಿಲ್ಲ. ದಾವಣಗೆರೆಗೆ ಏನೂ ವಿಶೇಷವಾದ ಯೋಜನೆ ತಂದಿಲ್ಲ. ಮನೆಗೆ ತೆರಳುವ ಕಾರ್ಯಕರ್ತರನ್ನು ಭಿಕ್ಷುಕರ ರೀತಿ ನಡೆಸಿಕೊಂಡಿದ್ದಾರೆ. ಇವತ್ತು ಪಕ್ಷದ ಹಿರಿಯರು ಕೂಡ ತಮ್ಮ ಬೇಸರ ಹೊರಹಾಕುತ್ತಿದ್ದಾರೆ. ನಮ್ಮ ಆಗ್ರಹ ಇರುವುದು ಅಭ್ಯರ್ಥಿ ಬದಲಾವಣೆ ಮಾತ್ರ ಎಂದು ಆಕ್ರೋಶ ಹೊರಹಾಕಿದ ರೇಣುಕಾಚಾರ್ಯ, “ಮೋದಿಯವರನ್ನು ಗೆಲ್ಲಿಸುವುದು ನಮ್ಮ ಗುರಿ” ಎಂದಿದ್ದಾರೆ.

ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಮನೆಯಲ್ಲಿ ಅಸಮಾಧಾನಿತರ ಸಭೆ ಸೇರಲಾಗಿತ್ತು. ಈ ಸಭೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಗುರುಸಿದ್ದನಗೌಡ ಪುತ್ರ ಡಾ. ರವೀಂದ್ರ ಸಭೆಯಲ್ಲಿದ್ದರು.

ಮೈಮೇಲೆ ಪೆಟ್ರೋಲ್ ಸುರಿದುಕೊಂಡ ರವೀಂದ್ರನಾಥ್ ಬೆಂಬಲಿಗ!

ಈ ಬಾರಿ ಸ್ಪರ್ಧಿಸುವ ಆಕಾಂಕ್ಷಿಗಳ ಪೈಕಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಕೂಡ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಿ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಕೂಡ ಇಂದು ನಡೆದಿದೆ.

gm

ಗುರುವಾರ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್ ನಿವಾಸದ ಬಳಿಯೇ ಯುವಕ ಪೆಟ್ರೋಲ್ ಸುರಿದುಕೊಂಡು ಈ ಯತ್ನ ನಡೆಸಿದ್ದಾನೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...