ದಾವಣಗೆರೆ | ಮತಕಳ್ಳತನ ತಡೆಯಲು ಯುವಕಾಂಗ್ರೆಸಿನಿಂದ ಬೂತ್ ಮಟ್ಟದಲ್ಲಿ ಯುವಕರ ನೇಮಕ

Date:

“ದೇಶಾದ್ಯಂತ ಮತಕಳ್ಳತನ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೂತ್ ಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ ಮತಕಳ್ಳತನ ನಡೆಯದಂತೆ ತಡೆಯುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡಲಿದೆ” ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ತಿಳಿಸಿದರು.

ಯೂತ್ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ನಗರದಲ್ಲಿ ಏರ್ಪಡಿಸಿದ್ದ ಓಟ್ ಚೋರಿ ವಿರುದ್ದ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ರಾಜ್ಯದಲ್ಲೆಡೆ ಯುವ ಕಾಂಗ್ರೆಸ್‌ನಿಂದ ಮತಕಳ್ಳತನ ವಿರುದ್ದ ಬೃಹತ್ ಹೋರಾಟ ನಡೆಸುತ್ತಿದ್ದೇವೆ. ಬೂತಮಟ್ಟದಲ್ಲಿ ಯಾವ ಮನೆಯಲ್ಲಿ ಎಷ್ಟು ಓಟ ಸೇರಿಸಿದ್ದಾರೆ. ಬೇರೆ ಕಡೆಯ ಓಟು ಇಲ್ಲಿ ತಂದು ಹಾಕುವುದು. ಎರಡು ಕಡೆ ಓಟು ಮಾಡುವುದು ಇಂತಹ ವಿಷಯಗಳನ್ನು ಯುವ ಕಾಂಗ್ರೆಸ್ ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಮತಕಳ್ಳತನದ ವಿರುದ್ದ ಯುವ ಕಾಂಗ್ರೆಸ್‌ನಿಂದ 10 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಎ.ಐ.ಸಿ.ಸಿ ಗೆ ಸಲ್ಲಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಮಹದೇವಪುರದಿಂದ ಹರಿಯಾಣದವರೆಗೂ ಓಟ್ ಚೋರಿ ನಡೆದಿದೆ. ಮಹದೇವಪುರದಲ್ಲಿ 1 ಲಕ್ಷ ಓಟು ಸೇರಿಸಲಾಗಿದೆ. ಹರಿಯಾಣದಲ್ಲಿ ಪ್ರತಿ 6 ಮತಕ್ಕೆ ಒಂದು ಓಟು ಬಿಜೆಪಿಗೆ ಹೋಗುವ ರೀತಿಯಲ್ಲಿ ಕಾರ್ಯ ನಡೆದಿದೆ. ಇದರಿಂದಾಗಿಯೇ ಹರಿಯಾಣದಲ್ಲಿ ಬಿಜೆಪಿ ಸರಕಾರ ಬಂದಿದೆ. ಅದರೆ, ಆರಂಭದಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಹೇಳಿದ್ದವು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದಿದೆ ಇದಕ್ಕೆ ಪ್ರಮುಖ ಕಾರಣ ವೂಟ್ ಚೂರಿ” ಎಂದು ಕಿಡಿಕಾರಿದರು.

“ಹರಿಯಾಣದ ಚುನಾವಣೆಯಲ್ಲಿ ೨೫ ಲಕ್ಷ ಓಟು ಚೋರಿಯಾಗಿದೆ. ಇದರಿಂದಾಗಿ ೨೫ ರಿಂದ ೩೦ ಎಂಎಲ್‌ಎಗಳು ಸೋತಿದ್ದಾರೆ. ಇದರ ವಿರುದ್ದ ನಮ್ಮ ನಾಯಕ ರಾಹುಲ್ ಗಾಂಧಿಯವರ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಜೊತೆಗೂಡಿದ್ದೇವೆ. ಬಿಜೆಪಿಯವರು ಹರಿಯಾಣದಲ್ಲಿ ಮತಗಳ್ಳತನ ಮಾಡಿದ ರೀತಿಯಲ್ಲಿ ರಾಜ್ಯದಲ್ಲಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೬೦ ಕ್ಕೂ ಹೆಚ್ಚು ಸೀಟುಗಳು ಬರಬೇಕಿತ್ತು. ಅದರೆ, ೧೩೬ ಸೀಟುಗಳು ಬಂದಿವೆ ಎಂದರು. ನಮ್ಮ ಪಕ್ಷ ಸಂವಿಧಾನ ನಂಬಿಕೆಯಿಟ್ಟಿದೆ. ಚುನಾವಣಾ ಆಯೋಗದ ಮೇಲೆ ಬಹಳ ನಂಬಿಕೆ ಇಟ್ಟಿದ್ದೇವೆ. ಅದರೆ, ಚುನಾವಣಾ ಆಯೋಗ ಉಡಾಫೆ ಉತ್ತರಗಳನ್ನು ನೀಡುತ್ತಿದೆ. ಬಿಜೆಪಿ ಆರ್‌ಎಸ್‌ಎಸ್ ಹೇಳಿದಂತೆ ಕೇಳುವ ಆಯುಕ್ತರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪ್ರಜಾತಂತ್ರ ಉಳಿಸಲು ನಮ್ಮ ಹೋರಾಟ ನಡೆಯುತ್ತಿದೆ. ಅದರೆ ಬಿಜೆಪಿ ಕ್ರಿಮಿನಲ್ ಆಜೆಂಡಾ ಇಟ್ಟುಕೊಂಡು ಸರಕಾರ ನಡೆಸುತ್ತಿದೆ. ನಮ್ಮ ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಅದರ ಆಶಯದಂತೆ ಬಿಜೆಪಿ ಆರ್‌ಎಸ್‌ಎಸ್ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕು. ಸಂವಿಧಾನ ವಿರೋಧವಾಗಿ ಕೆಲಸ ಮಾಡಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಈ ಸಂದರ್ಭದಲ್ಲಿ ಯೂತ್‌ಕಾಂಗ್ರೇಸ್ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹಮದ್, ತಾಲೂಕು ಘಟಕದ ಅಧ್ಯಕ್ಷ ಅನಸ್, ನಲ್ಲೂರು ವಸೀಂ, ಪುರಸಭೆ ಸದಸ್ಯ ತನ್‌ವೀರ್, ಗೌಸ್‌ಪೀರ್, ಅಣ್ಣಪ್ಪ ಸ್ವಾಮಿ ರಂಜಿತ್ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...