ದಾವಣಗೆರೆ | ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿರುವ ಹಳಬರ ಬದಲು ಹೊಸಬರಿಗೆ ಸಚಿವ ಸ್ಥಾನ ನೀಡಿ: ಶಾಸಕ ಬಸವರಾಜು ಶಿವಗಂಗಾ

Date:

“ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಅಭಿಪ್ರಾಯಪಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ ಅವರನ್ನೆಲ್ಲ ಕೈ ಬಿಡಬೇಕು. ಸಂಪುಟದಲ್ಲಿ 8 ರಿಂದ 10 ಜನರನ್ನು ಬಿಡಬೇಕು” ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ರಚನೆ ವಿಚಾರವಾಗಿ ರೀತಿ ಪ್ರತಿಕ್ರಿಯೆ ನೀಡಿದ ಅವರು “ಹೊಸ ಮುಖಗಳಿಗೆ ಅವಕಾಶ ಕೊಡಬೇಕು. 5 ರಿಂದ 6 ಬಾರಿ ಗೆದ್ದ ಶಾಸಕರುಗಳು ಇದುವರೆಗೂ ಸಚಿವರಾಗಿಲ್ಲ. ಅವರಿಗೂ ಸಚಿವ ಸ್ಥಾನ ಸಿಗಬೇಕು. ಎರಡು ವರ್ಷದ ಸಾಧನೆ ಎಂದು ಹೇಳುತ್ತಾರೆ. ಆದರೆ ಕೆಲವು ಸಚಿವರು ಏನು ಸಾಧನೆ ಮಾಡಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾರೆ. ಹಳಬರಿಗೆ ಸಚಿವ ಸ್ಥಾನಕ್ಕೆ ಕೋಕ್ ಕೊಟ್ರೆ ಒಳ್ಳೆಯದು. ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದು ಹೋಗಿದ್ದಾರೆ” ಎಂದು ಹೇಳಿದರು.

“ನಾನೇನು ಸನ್ಯಾಸಿಯಲ್ಲ, ನನಗೂ ಅಧಿಕಾರಿ ಕೊಟ್ಟರೆ ನಿಭಾಯಿಸುವೆ.‌ ಹೈಕಮಾಂಡ್ ಸಚಿವ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ. ಮಾತ್ರವಲ್ಲ ನಾನು ಆರು ತಿಂಗಳಲ್ಲಿ ಏನ್ ಕೆಲಸ ಮಾಡ್ತಿನಿ ಎಂದು ಬಾಂಡ್
ಬೇಕಾದ್ರೆ ಕೊಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಹಿರಿಯ ಶಾಸಕ ಡಿ.ಜಿ.ಶಾಂತನಗೌಡ್ರು ಇದ್ದಾರೆ. ಅವರು ಹಿರಿಯ ರಾಜಕಾರಣಿ
ಅವರಿಗೆ ಕೊಟ್ರೆ ನಾನು ಖುಷಿ ಪಡುತ್ತೇನೆ. ಒಂದು ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಬಾರದು ಎಂದೇನಿಲ್ಲ. ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ, ಕೆಲವರನ್ನು ಕೈ ಬಿಡಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಉಪವಿಭಾಗಾಧಿಕಾರಿಗಳ ಭರವಸೆ ಹಿನ್ನೆಲೆ ಅನಾಥ ಸೇವಾಶ್ರಮ ಅವ್ಯವಹಾರ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

“ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಕುರಿತು ಈಗ ಮಾತನಾಡುವುದು ಬೇಡ. ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಉತ್ತಮ ಆಡಳಿತ, ಉತ್ತಮ ಮಳೆ,
ಬೆಳೆ ಇದೆ. ಈಗ ಈ ವಿಷಯ ಕುರಿತು ಚರ್ಚೆ ಮಾಡುವುದು ಬೇಡ” ಎಂದು ಅಧಿಕಾರ ಹಂಚಿಕೆ ಕುರಿತು ಮೌನವಹಿಸಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...