ದಾವಣಗೆರೆ | ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ

Date:

“ಲೋಕಸಭಾ ಚುನಾವಣೆಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಕ್ಷ ನಿಷ್ಠೆ ಮರೆತು ಹಣ ಪಡೆದು ಕಾಂಗ್ರೆಸ್ ಬೆಂಬಲಿಸಿ ಪ್ರಚಾರ ಮಾಡಿದ್ದರು.‌ ಅವರು ಹಣ ಪಡೆದ ಸಾಕ್ಷ್ಯಗಳು ನನ್ನಲ್ಲಿದ್ದು, ದಾಖಲೆ ಸಮೇತ ಬಿಡುಗಡೆ ಮಾಡಲು ಸಿದ್ಧ” ಎಂದು ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ನಾನು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದೇನೆ ಎಂದು ಆರೋಪ ಮಾಡಿದ್ದಾರೆ.‌ ಅಕ್ರಮ ಚಟುವಟಿಕೆಯಲ್ಲಿ ತೊಡಗಿಲ್ಲ ಎಂಬುದಕ್ಕೆ ದೇವರ ಮುಂದೆ ಪ್ರಮಾಣ ಮಾಡಲು ಸಿದ್ದನಿದ್ದೇನೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಆರೋಪ ಮಾಡಿರುವ ರೇಣುಕಾಚಾರ್ಯ ಅವರು ಪ್ರಮಾಣ ಮಾಡಬೇಕು. ಇದಕ್ಕೆ ಸಿಗಂಧೂರು ಚೌಡೇಶ್ವರಿ, ಕಟೀಲು ಪರಮೇಶ್ವರಿ ಹಾಗೂ ಚನ್ನಗಿರಿ ತಾಲ್ಲೂಕಿನ ಮಾವಿನಹಳ್ಳಿ ಮಹಾರುದ್ರಸ್ವಾಮಿ ದೇಗುಲಕ್ಕೆ ಬರಲು ಸಿದ್ದನಿದ್ದೇನೆ’ ಎಂದು ಸವಾಲೆಸೆದರು.‌

“ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ರೇಣುಕಾಚಾರ್ಯ ಅವರು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷನಿಷ್ಠೆ ಮರೆತು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದರು. ಹಾಗಂತಾ ಇವರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿಲ್ಲ. ಇದಕ್ಕೆ ಸಂಬಂಧಿಸಿದ ದಾಖಲೆ ನನ್ನ ಬಳಿ ಇವೆ. ಸಮಯ ಬಂದಾಗ ಬಹಿರಂಗಪಡಿಸುವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇದಕ್ಕೂ ಮುನ್ನ ರೇಣುಕಾಚಾರ್ಯ ಅವರು 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಲು ಮುಂದಾಗಿದ್ದರು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ರನ್ನು ಭೇಟಿ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಮನೆ ಬಾಗಿಲಿಗೂ ಬಂದಿದ್ದರು. ತಮ್ಮ ನಿರ್ಧಾರವನ್ನು ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಬದಲಿಸಿ ಬಿಜೆಪಿಯಲ್ಲೇ ಮುಂದುವರೆದರು” ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

“ರೇಣುಕಾಚಾರ್ಯ ಯಾವ ಯಾವ ಕಡೆ ಎನೇನು ಸಂಬಂಧ ಇಟ್ಟಿದ್ದಾರೆ ಗೊತ್ತಿದೆ. ಈ ಎಲ್ಲ ವಿಚಾರ ವಿಜಯೇಂದ್ರಗೆ ತಿಳಿಸುವೆ. ಸಾಧು ಲಿಂಗಾಯತರ ಯುವಕರು ಬೆಳೆಯುವುದು ರೇಣುಕಾಚಾರ್ಯಗೆ ಇಷ್ಟವಿಲ್ಲ. ರೇಣುಕಾಚಾರ್ಯ ಲಾಟರಿ ಶಾಸಕ. ನಾನು ಹೋರಾಟ ಮಾಡಿ ಮೇಲೆ ಬಂದಿದ್ದೇನೆ” ಎಂದು ತಿಳಿಸಿದರು.

“ಭದ್ರಾ ಡ್ಯಾಂ ಬಲದಂಡೆ ಕಾಲುವೆ ವಿಚಾರದಲ್ಲಿ ದಾವಣಗೆರೆ ಜಿಲ್ಲೆಗೆ ಅನ್ಯಾಯ ಆಗಲು ಬಿಡಲ್ಲ. ಅದ್ರೆ ದಾವಣಗೆರೆ ಬಿಜೆಪಿ ನಿರುದ್ಯೋಗಿಗಳು ಹೋರಾಟ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

“ನಾನು ಕೂಡಾ ಡಿಕೆ ಶಿವಕುಮಾರ್ ಬ್ರದರ್ ಬೆಂಬಲಿಗ. ಸಿಎಂ ಹಾಗೂ ಡಿಸಿಎಂ ಆಪ್ತರಿಗೆ ಅನುದಾನ ಜಾಸ್ತಿ ಎಂದು ಶಾಸಕ ಬಾಲಕೃಷ್ಣ ಅವರು ಹೇಳಿದ್ದಾರೆ. ನನಗೆ ಆ ರೀತ ಅನುಭವ ಆಗಿಲ್ಲ. ನಾನು ಕೂಡಾ ಡಿಕೆ ಬ್ರದರ್ ಸಪೋಟರ್ ಇದ್ದೇನೆ. ನನಗೆ ಅಂತಹ ಅನುಭವ ಆಗಿಲ್ಲ. ಪಕ್ಷದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...