ದಾವಣಗೆರೆ | ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಸಭೆ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ನಿರ್ಣಯ ಕೈಗೊಂಡು, ದಾವಣಗೆರೆ ಲೋಕಸಭಾ ಕ್ಷೇತ್ರದ ಮಸೀದಿಗಳ ಮುತುವಲ್ಲಿ ಹಾಗೂ ವಿವಿಧ ಪಕ್ಷಗಳ ಮುಸ್ಲಿಂ ಮುಖಂಡರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ದಾವಣಗೆರೆ ತಾಜ್ ಪ್ಯಾಲೇಸ್ ನಲ್ಲಿ ಇಂದು ಸಭೆ ನಡೆಸಿ ಒತ್ತಾಯಿಸಿದರು.‌

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ (MLC) ಕೆ. ಅಬ್ದುಲ್ ಜಬ್ಬಾರ್ ಸಾಬ್ “ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಅಹಿಂದ ಮತಗಳ ಬೆಂಬಲ ಸಿಗಲಿದೆ. ಈ ಹಿಂದಿನಿಂದಲು ಕಾಂಗ್ರೆಸ್ ಪಕ್ಷದಲ್ಲಿ ಒಂದೇ ಕುಟುಂಬಕ್ಕೆ ಟಿಕೆಟ್ ಎನ್ನುವುದು ಇನ್ನೂ ಮುಂದೆ ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.‌

“ಶಾಮನೂರು ಕುಟುಂಬವನ್ನು 1994 ರಿಂದ ಮುಸ್ಲಿಂ ಸಮುದಾಯ ಗೆಲ್ಲಿಸಿಕೊಂಡು ಬಂದಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ. ಹಿಂದುಳಿದ ಸಮುದಾಯವಾದ ಮುಸಲ್ಮಾನರಿಗೆ ಶಾಮನೂರು ಕುಟುಂಬ ಬೆಂಬಲಿಸಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003688582

“ಶಾಮನೂರು ಕುಟುಂಬಕ್ಕೆ ಮುಸ್ಲಿಂ ಸಮುದಾಯ ಈ ಹಿಂದಿನಿಂದಲೂ ತ್ಯಾಗ ಮಾಡಿಕೊಂಡು ಬಂದಿದೆ. ಇನ್ನೂ ಮುಂದೆ ಇದನ್ನು ಅರಿತು ಶಾಮನೂರು ಕುಟುಂಬ ಮುಸಲ್ಮಾನರಿಗೆ ಬೆಂಬಲಿಸಬೇಕು. ಈಗ ಇಲ್ಲವೆಂದರೆ ಯಾವತ್ತೂ ನಮಗೆ ರಾಜಕೀಯ ನ್ಯಾಯ ಸಿಗಲು ಸಾಧ್ಯವಿಲ್ಲ. ಅದರಿಂದ ತಮ ತಮ್ಮ ಏರಿಯದಲ್ಲಿ ಹೆಚ್ಚು ಹೆಚ್ಚು ಚರ್ಚೆ ಮಾಡಿ” ಎಂದು ಮುಸ್ಲಿಂ ಬಾಂಧವರಿಗೆ ಕರೆ ನೀಡಿದರು

1003688586

ಜೆಡಿಎಸ್ ಪಕ್ಷದ ಜೆ.ಅಮನುಲ್ಲಾ ಖಾನ್ “ದಾವಣಗೆರೆ ಜಿಲ್ಲೆ ಎಲ್ಲ ಮುತುವಲ್ಲಿಗಳು ಹಾಗೂ ರಾಜಕೀಯ ಮುಖಂಡರುಗಳು ಹಾಗೂ ಮುಸ್ಲಿಂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸೇರಿ ಒಂದು ತೀರ್ಮಾನಕ್ಕೆ ಬರಬೇಕಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದೇ ಇದ್ದರೆ ಮುಂದಿನ ಯಾವ ಚುನಾವಣೆಯಲ್ಲೂ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಪಟ್ಟು ಹಿಡಿಯಬೇಕು” ಎಂದು ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಸಾಧಿಕ್ ಪೈಲ್ವಾನ್ ಮಾತನಾಡ “ಕಾಂಗ್ರೆಸ್ ಪಕ್ಷ ನಮ್ಮ ಮತಗಳ ಬೆಂಬಲ ಇಲ್ಲದೆ ಗೆಲ್ಲಲು ಸಾಧ್ಯವಿಲ್ಲ ನನ್ನ ಆತ್ಮೀಯ ಸ್ನೇಹಿತ ಕೆ. ಅಬ್ದುಲ್ ಜಬ್ಬಾರ್ ಮತ್ತು ನನಗೆ, ಯಾರಿಗೂ ಟಿಕೆಟ್ ನೀಡಿದರೂ ನಮ್ಮ ಮುಸ್ಲಿಂ ಸಮುದಾಯ ಒಗ್ಗಟ್ಟಿನಿಂದ ಬೆಂಬಲಿಸಲಿದೆ. (SIR) ಎಸ್ ಐ ಆರ್ ವಿಷಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾವಂತ ಯುವಕರು ಜಾಗೃತಿ ಯಿಂದ ಕೆಲಸ ಮಾಡಿ ತಮ ಮತ ಉಳಿಸಿಕೊಳ್ಳಬೇಕು” ಎಂದು ಸೂಚಿಸಿದರು.‌ಎಐಎಂಐಎಂ (AIMIM) ಪಕ್ಷದ ದಾವಣಗೆರೆ ಜಿಲ್ಲಾಧ್ಯಕ್ಷ ಮಹಮ್ಮದ್ ಅಲಿ ಶೋಯೇಬ್ ಮಾತನಾಡಿ
“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಸಮಾಜಿಕ ನ್ಯಾಯ ನೀಡದಂತೆ. ಇಲ್ಲ ಎಂದರೆ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ ಹಾಗೂ ಹೈದರಾಬಾದ್ ಸಂಸದರಾದ ಅಸಾವುದ್ದೀನ್ ಓವೈಸಿ ದಾವಣಗೆರೆ ಬಂದು ಪ್ರಚಾರ ಮಾಡಲಿದ್ದಾರೆ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ

ಸಭೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ದಾವಣಗೆರೆ ಜಿಲ್ಲೆಯ ಬಹುತೇಕ ಮಸೀದಿಗಳ ಮುತುವಲ್ಲಿಗಳು ಮತ್ತು ಮುಸ್ಲಿಂ ಸಮುದಾಯದ ಬಹುತೇಕ ಸಂಘ ಸಂಸ್ಥೆಗಳ ಮುಖಂಡರು ರಾಜಕೀಯವಾಗಿ ಒಂದು ವೇದಿಕೆಯ ಮೇಲೆ ಕಾಣಿಸಿಕೊಂಡರು.

ಈ ಸಭೆಯಲ್ಲಿ ಮುಸ್ಲಿಂ ಒಕ್ಕೂಟದ ಅಬ್ದುಲ್ ಘನಿ ತಾಹಿರ್, ಜೆಡಿಎಸ್ ಪಕ್ಷದ ಟಿ.ಅಸ್ಗರ್, ಬಿಜೆಪಿಯ ಸಿ. ನಾಸೀರ್ ಅಹ್ಮದ್, ಆಮ್ ಅದ್ಮಿಪಕ್ಷದ ಅದಿಲ್ ಖಾನ್ SDPI ಪಕ್ಷದ ಮುಖಂಡರು ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ಮಸೀದಿಗಳ ಮುತುವಲ್ಲಿಗಳು ಸೇರಿ ಮುಸ್ಲಿಂ ಸಮುದಾಯದ ಅನೇಕ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...