ಪಿಎಫ್‌ಐ ಪ್ರಕರಣ | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನದ ಬೆನ್ನಲ್ಲೇ ಹಲವೆಡೆ ಇಡಿ ದಾಳಿ

Date:

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನಿಷೇಧಿತ ಪಿಎಫ್‌ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳಿಗೆ ದಾಳಿ ನಡೆಸಿದೆ.

ಇತ್ತೀಚಿಗಷ್ಟೇ ಇಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿ ಅವರನ್ನು ಬಂಧಿಸಿದ್ದರು. ಇದೀಗ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.

ಇದನ್ನು ಓದಿದ್ದೀರಾ? ಮೂವರು ಪಿಎಫ್‌ಐ ಸದಸ್ಯರಿಗೆ ಜಾಮೀನು; ಇಡಿ ‘ಕುದುರೆಯ ಮುಂದೆ ಬಂಡಿ ಇರಿಸಿದೆ’ ಎಂದ ದೆಹಲಿ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಡಿಪಿಐ ದೆಹಲಿಯ ಎರಡು ಕಚೇರಿಗಳಲ್ಲಿ, ಕೇರಳದ ತಿರುವನಂತಪುರ, ಮಲಪ್ಪುರಂನಲ್ಲಿ, ಆಂಧ್ರಪ್ರದೇಶದ ನಡ್ಯಾಲ್, ಜಾರ್ಖಂಡ್‌ನ ಪಾಕೂರ್, ಮಹಾರಾಷ್ಟ್ರದ ಥಾಣೆ, ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಲಕ್ನೋ ಮತ್ತು ಜೈಪುರದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಆರೋಪದಲ್ಲಿ 2022ರ ಸೆಪ್ಟೆಂಬರ್‌ನಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ಕೇಂದ್ರ ಸರ್ಕಾರವು ಇದು ಕಾನೂನುಬಾಹಿರ ಸಂಘಟನೆ ಎಂದು ಕರೆದಿದೆ. ಹಾಗೆಯೇ ಪಿಎಫ್‌ಐ ತನ್ನ ಕ್ರಿಮಿನಲ್ ಕಾರ್ಯಗಳನ್ನು ಎಸ್‌ಡಿಪಿಐ ಸಹಾಯದಿಂದ ಮಾಡುತ್ತಿತ್ತು, ಪಿಎಫ್‌ಐ ಮತ್ತು ಎಸ್‌ಡಿಪಿಐ ನಡುವೆ ನಂಟಿದೆ ಎಂದು ಇಡಿ ಆರೋಪಿಸಿದೆ.

2009ರಲ್ಲಿ ಎಸ್‌ಡಿಪಿಐ ಸ್ಥಾಪಿಸಲಾಗಿದ್ದು, ಅದರ ಮುಖ್ಯ ಕಚೇರಿ ದೆಹಲಿಯಲ್ಲಿದೆ. ಇದು ಪಿಎಫ್‌ಐನ ರಾಜಕೀಯ ಪಕ್ಷ ಎಂಬ ಆರೋಪ ಮಾಡಲಾಗಿದೆ. ಪಿಎಫ್‌ಐ ಸಂಘಟನೆ ನಿಷೇಧದ ಬೆನ್ನಲ್ಲೇ ಎಸ್‌ಡಿಪಿಐ ಮೇಲೆಯೂ ಮನಿ ಲಾಂಡರಿಂಗ್ ಆರೋಪಗಳು ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...