ದೆಹಲಿ| ಚುನಾವಣೆ ಹೊಸ್ತಿಲಲ್ಲೇ ಐವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

Date:

ದೆಹಲಿಯಲ್ಲಿ ಮತದಾನಕ್ಕೆ ಕೇವಲ 20 ದಿನಗಳ ಮೊದಲು ಇತ್ತೀಚೆಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅರವಿಂದರ್ ಸಿಂಗ್ ಲವ್ಲಿ ಕೆಳಗಿಳಿದಿದ್ದು, ಶನಿವಾರ ಲವ್ಲಿ ಅವರು ಇತರ ನಾಲ್ವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಆಗಿದ್ದಾರೆ.

“ನಾವು ಎಲ್ಲಾ 70 ದೆಹಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಸಂಪರ್ಕ ಹೊಂದಿದ್ದೇವೆ. ರಾಜೀನಾಮೆ ನೀಡಿದ ನಂತರ ಪ್ರಾಮಾಣಿಕವಾಗಿ ಮನೆಯಲ್ಲಿ ಕುಳಿತುಕೊಳ್ಳಲು ಯೋಚಿಸಿದ್ದೆ. ಆದರೆ ಅವರೆಲ್ಲರೂ ದೆಹಲಿ ಮತ್ತು ದೇಶಕ್ಕಾಗಿ ಹೋರಾಡಲು ನಾನು ಬಲವಾದ ಪಕ್ಷವನ್ನು ಸೇರಬೇಕೆಂದು ಹೇಳಿದರು” ಎಂದು ಬಿಜೆಪಿ ಸೇರಿದ ಬಳಿಕ ಲವ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಐವರು ಮಾತ್ರವಲ್ಲ ಇನ್ನೂ ಹಲವಾರು ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರಲಿದ್ದಾರೆ. ಮುಂಬರುವ ದಿನಗಳಲ್ಲಿ ದೆಹಲಿಯ ಜನರ ಪರವಾಗಿ ಹೋರಾಡಲು ಹಲವಾರು ನಾಯಕರು ಈಗಾಗಲೇ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಸೇರಲಿದ್ದಾರೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಹರ್ದೀಪ್ ಪುರಿ ಅವರ ಸಮ್ಮುಖದಲ್ಲಿ ಮಾಜಿ ಕಾಂಗ್ರೆಸ್ ಶಾಸಕರಾದ ರಾಜ್‌ಕುಮಾರ್ ಚೌಹಾಣ್, ನೀರಜ್ ಬಸೋಯಾ, ನಸೀಬ್ ಸಿಂಗ್ ಬಿಜೆಪಿ ಸೇರಿದ್ದಾರೆ. ದೆಹಲಿ ಯುವ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಮಲಿಕ್ ಕೂಡಾ ಬಿಜೆಪಿ ಸೇರಿದ್ದಾರೆ. ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ದೆಹಲಿ ಕಾಂಗ್ರೆಸ್‌ನ ಬಲ ಕ್ಷೀಣ?

ಕಾಂಗ್ರೆಸ್‌ನಲ್ಲಿದ್ದ ಲವ್ಲಿ 2017 ರಲ್ಲಿ ಬಿಜೆಪಿ ಸೇರಿದ್ದು ಬಳಿಕ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ. ಅವರು 2023 ರಲ್ಲಿ ನಗರ ಘಟಕದ ಮುಖ್ಯಸ್ಥರಾಗಿದ್ದರು. ಆದರೆ ಇತ್ತೀಚೆಗೆ ಆ ಸ್ಥಾನವನ್ನು ತೊರೆದಿದ್ದ ಲವ್ಲಿ ಈಗ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಬಿಜೆಪಿ ಸೇರಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ದಶಕದಲ್ಲಿ ಯಾವುದೇ ವಿಧಾನಸಭೆ ಚುನಾವಣೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿಲ್ಲ. ಈಗ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಳಾಯನ ಆಗುತ್ತಿರುವುದು ಕಾಂಗ್ರೆಸ್‌ ಬಲವನ್ನು ಮತ್ತಷ್ಟು ಕುಗ್ಗಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...