ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Date:

“ಎಂದಿನಿಂದ ಬಸ್ ವ್ಯವಸ್ಥೆ ಮಾಡುತ್ತೀರಾ? ಸೋಮವಾರದಿಂದಲೇ ಈ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಆಗಬೇಕು..” ಇದು ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಬಸ್ ವ್ಯವಸ್ಥೆ ಇಲ್ಲ ಎಂಬ ವಿದ್ಯಾರ್ಥಿನಿಯರ ಮನವಿಗೆ ಸ್ಪಂದಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ ಪರಿ.

ಬೇವೂರು ಮತ್ತು ತಿಟ್ಟಮಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ಸಿದ್ದರಾಮೇಶ್ವರ ಕಾಲೇಜು ಹಾಗೂ ಇತರೆ ಸರ್ಕಾರಿ ಶಾಲೆಗಳ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು “ಸರ್ ನಮಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲ. ಚನ್ನಪಟ್ಟಣದಿಂದ ಮಲ್ಲನಕುಪ್ಪೆಗೆ ಪ್ರತಿದಿನ 9 ಗಂಟೆಗೆ ತಲುಪುವಂತೆ ಬಸ್ ವ್ಯವಸ್ಥೆ ಕಲ್ಪಿಸಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿಗೆ ಸ್ಪಂದಿಸಿದ ಶಿವಕುಮಾರ್ ಅವರು, “ನಮ್ಮ ಹೆಣ್ಣು ಮಕ್ಕಳು ಧೈರ್ಯ, ಓದುವ ಛಲದಿಂದ ಇಲ್ಲಿಯವರೆಗೂ ಬಂದಿದ್ದಾರೆ. ನಿಮ್ಮ ಅಧಿಕಾರಿಗೆ ಹೇಳಿ” ಎಂದು ಪಕ್ಕದಲ್ಲಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಹೇಳಿದರು. ಆಗ ಕೆಎಸ್ ಆರ್ ಟಿಸಿ ಅಧಿಕಾರಿಯನ್ನು ಕರೆದ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು “ಸೋಮವಾರವೇ ಬಸ್ ಬರಬೇಕು. ಈ ವಿದ್ಯಾರ್ಥಿನಿಯರ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

ಎರಡು ಪಂಚಾಯತಿಗಳು ಸೇರಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ನಾಗರೀಕರು ಸಲ್ಲಿಸಿದರು. ಬಗರ್ ಹುಕುಂ ಜಮೀನು, ನಿವೇಶನ, ಉತ್ತಮ ರಸ್ತೆ, ಬಸ್ ವ್ಯವಸ್ಥೆಗಾಗಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...