ಅಡೆತಡೆ ಇಲ್ಲದೆ ಐದು ವರ್ಷವೂ ‘ಗ್ಯಾರಂಟಿ’ ಇರಲಿದೆ: ಶಾಸಕ ಬಾಲಕೃಷ್ಣ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

Date:

ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಪಾಳಯವು, “ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಕಾಂಗ್ರೆಸ್ ಸರ್ಕಾರ ಅವಮಾನಿಸುತ್ತಿದೆ” ಎಂದು ಟೀಕಿಸಿದೆ.

ಕಾಂಗ್ರೆಸ್ ಶಾಸಕನ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಯಾವುದೇ ಅಡೆತಡೆ ಇಲ್ಲದೆ ಐದು ವರ್ಷವೂ ‘ಗ್ಯಾರಂಟಿ’ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯವರು ಆ ರೀತಿಯ ಹೇಳ್ತಿದ್ದಾರೆ. ಹಾಗಾಗಿ ಎಚ್ಚರಿಕೆಯಿಂದ ಇರಿ ಎಂದಷ್ಟೇ ಮಾಗಡಿ ಬಾಲಕೃಷ್ಣ ಹೇಳಿದ್ದು. ಗ್ಯಾರಂಟಿ ಯೋಜನೆ ಐದು ವರ್ಷಗಳ ಕಾಲ ಯಾವುದೇ ಅಡೆ ತಡೆ ಇಲ್ಲದೆ ಮುಂದುವರೆಯಲಿದೆ” ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಶಾಸಕ ಬಾಲಕೃಷ್ಣ ಹೇಳಿಕೆ ರಾಜ್ಯದ ಜನರಿಗೆ ಅವಮಾನ ಮಾಡಿದಂತೆ ಎನ್ನುವ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ಉತ್ತರ ನೀಡಲು ನಾನು ತಯಾರಿಲ್ಲ” ಎಂದು ತಿಳಿಸಿದರು.

ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದೇನು?
ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಶಾಸಕ ಬಾಲಕೃಷ್ಣ, “ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಕುರಿತು, ಮುಖ್ಯಮಂತ್ರಿ ಅವರಿಗೂ ಹೇಳಿದ್ದೇನೆ” ಎಂದಿದ್ದರು.

ಅಲ್ಲದೇ, “ಒಂದು ವೇಳೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವೇನಾದರೂ ಕಡಿಮೆ ಸ್ಥಾನ ಗಳಿಸಿದರೆ, ಜನ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದರ್ಥ. ಆಗ, ಅವುಗಳನ್ನು ರದ್ದು ಮಾಡಿ ನಾವೂ ಅವರಂತೆ ಮಂದಿರದ ರಾಜಕಾರಣ ಮಾಡಬೇಕಾಗುತ್ತದೆ” ಎಂದಿದ್ದರು.

ಈ ಹೇಳಿಕೆಯನ್ನು ಬಿಜೆಪಿ ಪಾಳಯವು ಕಿಡಿಕಾರಿದ್ದಲ್ಲದೇ, “ಸರ್ಕಾರ ಕನ್ನಡಿಗರಿಗೆ ಅವಮಾನ ಮಾಡುತ್ತಿದೆ” ಎಂದು ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಐಟಿ ಸೆಲ್, “ಕಾಂಗ್ರೆಸ್ ಸರ್ಕಾರವು ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಅವಮಾನಿಸುತ್ತಿದೆ. ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರು ನಿಮ್ಮ ನಕಲಿ ಗ್ಯಾರಂಟಿಗಳಿಗೆ ಎಂದೂ ಕೈ ಚಾಚಿಲ್ಲ, ಮುಂದೆಯೂ ಚಾಚುವುದಿಲ್ಲ” ಎಂದು ಹೇಳಿದೆ.

“ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸುವ ತಾಕತ್ತು ಕಾಂಗ್ರೆಸ್‌ ಸರ್ಕಾರಕ್ಕಿಲ್ಲ. ಆಡಳಿತ ವಿರೋಧಿ ಅಲೆಯಲ್ಲಿ ಮುಳುಗುತ್ತಿರುವ ಕಾಂಗ್ರೆಸ್‌, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೈ ಸುಟ್ಟು ಕರಕಲಾಗುವ ಕಾರಣ ಈಗ ಕನ್ನಡಿಗರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಹೆಚ್ಚಿನ ತೆರಿಗೆ ವಸೂಲಿ ಮಾಡಿ, ಬೆಲೆಯೇರಿಕೆಯ ಬರೆ ಎಳೆದು, ಈಗ ಗ್ಯಾರಂಟಿಗಳಿಗೂ ಕೋಕ್‌ ನೀಡುತ್ತೇವೆಂಬ ಗೊಡ್ಡು ಬೆದರಿಕೆ ಹಾಕುತ್ತಿದೆ. ಸ್ವಾಭಿಮಾನಿ ಕನ್ನಡಿಗರು ನಿಮ್ಮ ಸುಳ್ಳುಗಳಿಗೆ ಬಲಿಯಾಗದೆ, ನಕಲಿ ಗ್ಯಾರಂಟಿಗಳಿಗೆ ಮಣಿಯದೆ, ಮೋದಿ ಎಂಬ ಅಸಲಿ ಗ್ಯಾರಂಟಿಯನ್ನು ಅಪ್ಪಿಕೊಳ್ಳುವುದು ಖಚಿತ-ನಿಶ್ಚಿತ-ಖಂಡಿತ” ಎಂದು ಬಿಜೆಪಿ ತಿಳಿಸಿದೆ.

ಕಾಂಗ್ರೆಸ್‌ನಿಂದಲೂ ಕೌಂಟರ್

ಈ ಬಗ್ಗೆ ಕಾಂಗ್ರೆಸ್ ಕೂಡ ಕೌಂಟರ್ ಮಾಡಿದ್ದು, “ನಮ್ಮ ಐದೂ ಗ್ಯಾರಂಟಿ ಯೋಜನೆಗಳು ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಯೋಜನೆಗಳು. ಐದು ವರ್ಷಗಳ ಕಾಲ ಸರ್ಕಾರ ಇರುವವರೆಗೂ ಈ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಂಟಕ ಇರುವುದಿಲ್ಲ. ಆದರೆ ಬಿಜೆಪಿ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಅಪಪ್ರಚಾರ ನಡೆಸುತ್ತಿದೆ. ಬಹುಶಃ ಜನರ ಸುಭಿಕ್ಷೆ ಬಿಜೆಪಿಗೆ ಇಷ್ಟವಿದ್ದಂತಿಲ್ಲ” ಎಂದು ಹೇಳಿದೆ.

“ಜನಕಲ್ಯಾಣ ಯೋಜನೆಗಳ ವಿರುದ್ಧವಿರುವ ಬಿಜೆಪಿಗೆ ಅವಕಾಶ ಸಿಕ್ಕರೆ ರದ್ದು ಮಾಡುವುದಕ್ಕೆ ಹಿಂಜರಿಯುವುದಿಲ್ಲ. ಬಿಜೆಪಿ ಬಂಡವಾಳಶಾಹಿಗಳ ಪರವೇ ಹೊರತು ಬಡಜನರ ಪರವಲ್ಲ. ಬಿಜೆಪಿಯ ಯಾವುದೇ ಅಪಪ್ರಚಾರಗಳಿಗೂ ಜನತೆ ಕಿವಿಗೊಡದೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಇನ್ನಷ್ಟು ಜನಕಲ್ಯಾಣ ಕಾರ್ಯಕ್ರಮಗಳನ್ನು ಪಡೆಯಲು ಮುಂದಾಗಬೇಕು” ಎಂದು ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...