‘ಬ್ರ್ಯಾಂಡ್​ ಬೆಂಗಳೂರು’ ಕಲ್ಪನೆ ಜಾರಿಗೆ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ ಡಿಸಿಎಂ ಡಿಕೆ ಶಿವಕುಮಾರ್

Date:

  • ‘ಬ್ರ್ಯಾಂಡ್​ ಬೆಂಗಳೂರು’ ಬಗ್ಗೆ ಎರಡನೇ ಸಭೆ ನಡೆಸಿದ ಡಿಸಿಎಂ
  • ‘ಟನಲ್‌ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ’

ಸಮಗ್ರ ರಾಜಧಾನಿಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ‘ಬ್ರ್ಯಾಂಡ್​ ಬೆಂಗಳೂರು’ ಕಲ್ಪನೆ ಬಗ್ಗೆ ಸಾಮಾನ್ಯ ಜನರಿಂದ ಹಿಡಿದು ಎಲ್ಲ ವರ್ಗದ ಜನರಿಂದ ಸಲಹೆಗಳನ್ನು ಸರ್ಕಾರ ಆಹ್ವಾನಿಸಿದೆ.

ಈ ಕುರಿತು ಬುಧವಾರ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ‘ಬ್ರ್ಯಾಂಡ್​ ಬೆಂಗಳೂರು’ ಬಗ್ಗೆ ಎರಡನೇ ಸಭೆ ನಡೆಯಿತು. ಈ ಸಭೆಯಲ್ಲಿ ಬ್ರಾಂಡ್ ಬೆಂಗಳೂರಿಗೆ ಸಾರ್ವಜನಿಕರು ಮಾಹಿತಿ ನೀಡಲು ಪೋರ್ಟಲ್ ಲಾಂಚ್ ಮಾಡಿದರು.

ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್‌, “ಬೆಂಗಳೂರಿನಲ್ಲಿ ಚಿಕ್ಕ ಸಮಸ್ಯೆ ಕಂಡುಬಂದರೂ ಹೊರಗೆ ದೊಡ್ಡದಾಗಿ ಬಿಂಬಿತವಾಗುತ್ತೆ. ಕಾರಣ ಬೆಂಗಳೂರು ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರ. ಹೀಗಾಗಿ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಕುರಿತು ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಜುಲೈ 15ರ ಒಳಗೆ ಸಾರ್ವಜನಿಕರು ಸಲಹೆ ಕೊಡಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಬಿಲ್ಡರ್ಸ್‌, ಉದ್ಯಮಿಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈಗ ಸಾಮಾನ್ಯ ಜನರ ಸಲಹೆಗಳನ್ನು ನಾವು ಕೇಳುತ್ತೇವೆ. ಮಾಜಿ ಸಿಎಂ ಬೊಮ್ಮಾಯಿ ಅವರ ಸಲಹೆಯನ್ನೂ ಕೇಳುತ್ತೇವೆ. ಅವರ ಭೇಟಿಗೆ ಸಮಯ ಕೇಳಿದ್ದೆ, ಅವರು ಸದ್ಯ ಬ್ಯುಸಿ ಇದ್ದಾರೆ” ಎಂದರು.

“1 ಕೋಟಿ 60 ಲಕ್ಷ ಜನ ಬೆಂಗಳೂರಿನಲ್ಲಿ ಇದ್ದಾರೆ. ಆದರೆ ಪ್ರತಿದಿನ ಬಂದು ಹೋಗುವವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ನೆಲೆಸಲು ಇಷ್ಟಪಡುತ್ತಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಏನು ಕೊಡಬೇಕು ಅಂತ ಮುಖ್ಯಮಂತ್ರಿ ಅವರು ಅಧ್ಯಯನ ಮಾಡುತ್ತಿದ್ದಾರೆ. ಅದನ್ನು ಅವರೇ ಘೋಷಣೆ ಮಾಡ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹೊಸ ʼಸ್ಮಾರ್ಟ್ ಸಿಟಿʼ ದಾವಣಗೆರೆಯ ಭರಾಟೆಯಲಿ ಹಳೆಯ ಡಾವಣಗೇರಿ ಕಳೆಯದಿರಲಿ

ಟನಲ್‌ ಮಾಡುವ ಬಗ್ಗೆ ಚರ್ಚೆ

“ಪ್ರಮುಖ ನಗರಗಳಲ್ಲಿ ಫುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರಂ, ಬಸವನಗುಡಿಯಲ್ಲಿ ಫುಟ್ ಪಾತ್ ಸಮಸ್ಯೆ ಬಹಳ ಇದೆ. ಬೆಂಗಳೂರು ಟ್ರಾಫಿಕ್ ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಟನಲ್‌ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ” ಎಂದರು.

ಏಳು ವಿಚಾರದಲ್ಲಿ ಜನರು ಸಲಹೆ ನೀಡಬಹುದು.

ಸಂಚಾರಮುಕ್ತ ಬೆಂಗಳೂರು
ಹಸಿರು ಬೆಂಗಳೂರು
ಸ್ವಚ್ಛ ಬೆಂಗಳೂರು
ಜನಹಿತ ಬೆಂಗಳೂರು
ಆರೋಗ್ಯಕರ ಬೆಂಗಳೂರು
ಟೆಕ್‌ ಬೆಂಗಳೂರು
ಜಲಸುರಕ್ಷಾ ಬೆಂಗಳೂರು

www.brandbengaluru.karnataka.gov.in ವೆಬ್ ಸೈಟ್ ನಲ್ಲಿ ಜನರು ಸಲಹೆ ನೀಡಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...