ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

Date:

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು” ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಅವರು ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ” ಎಂದರು.

“ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದ್ದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ ಅವರು ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಐಟಿ ತನಿಖೆ ಬಗ್ಗೆ ಸರ್ಕಾರದ ನಿಲುವೇನು ಎಂದು ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ನಾನು ಸರ್ಕಾರದ ಭಾಗವಾಗಿದ್ದರೂ, ಇನ್ನೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ” ಎಂದರು.

ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿ ಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ” ಎಂದು ಡಿ ಕೆ ಶಿವಕುಮಾರ್ ಕೇಳಿದರು.

ಕುಮಾರಸ್ವಾಮಿ ಈ ಪ್ರಕರಣದಲ್ಲಿ ನನ್ನ ಹೆಸರು ಹೇಳಲಿ: ಡಿಸಿಎಂ ಸವಾಲು

ಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ, ಅವರಿಗೆ ಒಳ್ಳೆಯದಾಗುತ್ತಾ ಎಂದು ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ಅವರು ನನ್ನ ಹೆಸರು ಹೇಳಿ ಮಾತನಾಡಲಿ. ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ನುಡಿಮುತ್ತುಗಳನ್ನು ಹೇಳುತ್ತೇನೆ. ಹಾಗಾದರೆ ಆ ಹೆಣ್ಣು ಮಕ್ಕಳ ಮಾನ ಹರಣವಾಗಿರುವುದನ್ನು ಕುಮಾರಸ್ವಾಮಿ ಅವರು ಈ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರಾ?” ಎಂದು ಮರು ಪ್ರಶ್ನೆ ಹಾಕಿದ್ದಾರೆ.

“ಮಾಧ್ಯಮಗಳು ಮೊದಲು ಈ ಬಗ್ಗೆ ರಾಜ್ಯದ ಜನರಿಗೆ ಬೆಳಕು ಚೆಲ್ಲಲಿ. ಮಹಿಳಾ ಆಯೋಗ ಹಂತ ಹಂತವಾಗಿ ಏನು ಮಾಡಬೇಕೋ ಮಾಡಲಿ. ನೀವು ಈ ವಿಚಾರವಾಗಿ ಹೆಚ್ಚಿನ ತನಿಖೆ ಮಾಡಿ ಮಾಹಿತಿ ಒದಗಿಸಿಕೊಟ್ಟರೆ, ನಾವು ಕೂಡ ಮುಂದಿನ ಹೆಜ್ಜೆ ಬಗ್ಗೆ ಗಮನ ಹರಿಸುತ್ತೇವೆ” ಎಂದು ತಿಳಿಸಿದರು.

ಇಬ್ಬರು ಸಂತ್ರಸ್ತ ಮಹಿಳೆಯರು ಡಿಜಿ ಅವರಿಗೆ ದೂರು ನೀಡಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ತಿಳಿದುಕೊಂಡು ಆಮೇಲೆ ಮಾತನಾಡುತ್ತೇನೆ. ಮಾಹಿತಿ ಇಲ್ಲದೆ ಮಾತನಾಡಬಾರದು” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...