100 ಕೋಟಿ ಆಫರ್ ಆರೋಪ: ‘ವಕೀಲ ದೇವರಾಜೇಗೌಡ ಮೆಂಟಲ್ ಕೇಸ್’ ಎಂದ ಡಿಸಿಎಂ ಡಿ ಕೆ ಶಿವಕುಮಾರ್‌

Date:

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು” ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಮೇ 17ರಂದು ಹಾಸನದಲ್ಲಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, “ಈ ಆರೋಪ ಆಧಾರಹಿತ. ದೇವರಾಜೇಗೌಡ ಓರ್ವ ಮೆಂಟಲ್ ಕೇಸ್. ತಲೆ ಕೆಟ್ಟಿದೆ. ಆತನ ಆರೋಪಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು 100 ಕೋಟಿ ರೂ. ಆಫರ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ಕೊಡಲಿ. ರಾಷ್ಟ್ರೀಯ, ರಾಜ್ಯ ಮಾಧ್ಯಮಗಳು ಆರೋಪಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬಾರದು” ಎಂದರು.

“ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಆತನ ತಲೆ ಕೆಟ್ಟಿದೆ. ನಾನು ಯಾರ ಜೊತೆಯಲ್ಲೂ ಮಾತನಾಡಿಲ್ಲ. ನನ್ನ ಹತ್ತಿರ ಯಾವುದಕ್ಕೂ ನೂರಾರು ಜನ ಬರುತ್ತಿರುತ್ತಾರೆ. ಬರುವವರನ್ನು ಸ್ಕ್ಯಾನ್‌ ಮಾಡಲು ಆಗುತ್ತಾ” ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿಕೆಶಿ: ದೇವರಾಜೇಗೌಡ ಹೊಸ ಆರೋಪ

“ಕೆಲವರಿಗೆ ನನ್ನ ಹೆಸರನ್ನ ಉಪಯೋಗಿಸಿಕೊಂಡರೆ ಮಾರ್ಕೆಟ್ ಸಿಗುತ್ತದೆ ಎಂದುಕೊಂಡಿದ್ದಾರೆ. ಅದಕ್ಕಾಗಿ ನನ್ನ ಹೆಸರನ್ನು ಬಳಸಿಕೊಳ್ಳುತ್ತಿರುತ್ತಾರೆ. ದೇವರಾಜೇಗೌಡ ಮೆಂಟಲ್ ಕೇಸ್. ಯಾರೋ ಏನೋ ಹೇಳಿದ್ರು ಎಂದುಕೊಂಡು ನಾನು ತಲೆ ಕೆಡಿಸಿಕೊಳ್ಳಲ್ಲ. 100 ಕೋಟಿ ಆಫರ್‌ಗೆ ಏನಾದರೂ ಸಾಕ್ಷ್ಯ ಇದ್ದರೆ ಆಗಬಹುದು. ಇಂತಹ ಆರೋಪಗಳು ಬಂದಾಗ ಅದನ್ನು ಸರಿಯಾಗಿ ತಿಳಿದುಕೊಳ್ಳದೆ ವರದಿ ಮಾಡುವ ಮಾಧ್ಯಮಗಳ ಬಗ್ಗೆ ನನಗೆ ಅನುಕಂಪ ಆಗ್ತಾ ಇದೆ. ಇದರಲ್ಲಿ ಏನಾದರೂ ಸತ್ಯ ಇದೆಯೇ, ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದದ್ದು ಮಾಧ್ಯಮಗಳ ಜವಾಬ್ದಾರಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಕಿವಿಮಾತು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ಲಾನ್ ಬಿ ಬಗೆಗಿನ ಮಾತು ಮತ್ತು ನಾಯಕನ ಹಿಂದಿನ ನಾಯಕ

“ಎಲ್ಲರೂ ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಸಂತ್ರಸ್ತೆಯರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಯಾಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡುವುದಿಲ್ಲ. ರಾಜ್ಯದಲ್ಲಿ ಮಳೆ, ಬೆಳೆಯಾಗಲಿ ಎಂದು ಎಲ್ಲರೂ ಪ್ರಾರ್ಥಿಸಿ” ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮನವಿ ಮಾಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...