ತೆಲುಗು ಚಿತ್ರರಂಗದಲ್ಲಿ ಕುಖ್ಯಾತಿ ಗಳಿಸಿದ ಡಿಸಿಎಂ ಪವನ್ ಕಲ್ಯಾಣ್‌ ಸಿನಿಮಾ

Date:

ಆಂಧ್ರಪ್ರದೇಶ ರಾಜಕಾರಣದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗಿಂತ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಸದ್ದು ಮಾಡುತ್ತಿದ್ದಾರೆ. ಪವನ್ ಕಲ್ಯಾಣ್ ಅವರ ಪಕ್ಷ ‘ಜನ ಸೇನಾ’ ಕೇಂದ್ರದಲ್ಲಿ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಂಡಿದ್ದು, ಆಂಧ್ರದಲ್ಲಿ ನಾಯ್ಡು ಅವರ ಮೈತ್ರಿ ಸರ್ಕಾರದ ಭಾಗವಾಗಿದೆ. ಸದಾ ಮೋದಿ ಭಜನೆ ಮಾಡಲು ಆರಂಭಿಸಿರುವ ಪವನ್ ಕಲ್ಯಾಣ್, ತಿರುಪತಿ ಲಡ್ಡು ವಿವಾದ ಮುನ್ನೆಲೆಗೆ ಬಂದಾಗ ತಿರುಮಲ ಬೆಟ್ಟದ ಪ್ರತಿಮೆಟ್ಟಿಲುಗಳಿಗೆ ನಾಮ ಬಳಿದು, ಪೂಜೆ ಸಲ್ಲಿಸಿದ್ದರು. ಕುಂಭಮೇಳದಲ್ಲಿ ಭಾಗಿಯಾಗಿ, ನೆಟ್ಟಿಗರ ಟ್ರೋಲ್‌ಗೂ ಗುರಿಯಾಗಿದ್ದರು. ಇದೀಗ, ತಮ್ಮ ಪುತ್ರ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದು, ಆತನ ಚೇತರಿಕೆಗಾಗಿ ತಿರುಪತಿಯಲ್ಲಿ ತಮ್ಮ ಪತ್ನಿಯ ತಲೆ ಕೂದಲು ಮುಡಿ ಕೊಡಿಸಿದ್ದಾರೆ.

ರಾಜಕೀಯ ಪ್ರವೇಶಿಸಿದ ಬಳಿಕ, ಸಂಘಪರಿವಾರದ ಭಕ್ತನಂತೆ ವರ್ತಿಸುತ್ತಿರುವ ಪವನ್‌ ಕಲ್ಯಾಣ್ ಚಿತ್ರರಂಗದಿಂದ ಹೊರಗುಳಿದಂತೆ ಕಾಣಿಸುತ್ತಿದ್ದಾರೆ. ಆದರೂ, ಅವರ ಎರಡು ಸಿನಿಮಾಗಳಿಗೆ ಸಹಿ ಮಾಡಿದ್ದು, ಚಿತ್ರೀಕರಣವನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ, ನಿರ್ದೇಶಕರು, ನಿರ್ಮಾಪಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪವನ್‌ ಕಲ್ಯಾಣ್ ನಿರ್ಲಕ್ಷ್ಯದ ಕಾರಣಕ್ಕಾಗಿ ಅವರ ಸಿನಿಮಾವೊಂದು ತೆಲುಗು ಚಿತ್ರರಂಗದಲ್ಲಿ ಕುಖ್ಯಾತಿಗೆ ಗುರಿಯಾಗಿದೆ. ಆ ಸಿನಿಮಾ ‘ಹರಿಹರ ವೀರ ಮಲ್ಲು’.

ಪವನ್ ಕಲ್ಯಾಣ್ ಅವರು ‘ಹರಿಹರ ವೀರ ಮಲ್ಲು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾ ಚಿತ್ರೀಕರಣ ಆರಂಭವಾಗಿ ಬರೋಬ್ಬರಿ 5 ವರ್ಷಗಳಾಗಿವೆ. ಆದರೂ, ಚಿತ್ರೀಕರಣ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಪವನ್ ಕಲ್ಯಾಣ್‌ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗದೇ ಇರುವ ಕಾರಣ, ಸಿನಿಮಾ ಇನ್ನೂ ನಿರ್ಮಾಣ ಹಂತದಲ್ಲಿಯೇ ಇದೆ. ಈ ವಿಳಂಬದ ಕಾರಣದಿಂದಲೇ ಸಿನಿಮಾ ಕುಖ್ಯಾತಿ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಯಾವುದೇ ಸಿನಿಮಾ ಘೋಷಣೆಯಾಗಿ, ಸೆಟ್ಟೇರಿದರೆ ಆ ಸಿನಿಮಾದ ಚಿತ್ರೀಕರಣ ಮತ್ತು ಸಂಕಲನ ಗರಿಷ್ಠ 3 ವರ್ಷಗಳಲ್ಲಿ ಪೂರ್ಣಗೊಳ್ಳುತ್ತದೆ. ಆದರೆ, ‘ಹರಿಹರ ವೀರ ಮಲ್ಲು’ ಮಾತ್ರ 5 ವರ್ಷಗಳಾದರೂ ಇನ್ನೂ ಚಿತ್ರೀಕರಣವೇ ಮುಗಿದಿಲ್ಲ. ತೆಲುಗು ಚಿತ್ರರಂಗದಲ್ಲಿ ಈವರೆಗೆ ಯಾವ ಸಿನಿಮಾ ಕೂಡ 3 ವರ್ಷಗಳ ಅವಧಿಯನ್ನು ಮೀರಿ, ನಿರ್ಮಾಣ ಆಗಿರಲಿಲ್ಲ. ಆದರೆ, ‘ಹರಿಹರ ವೀರ ಮಲ್ಲು’ ಆ ಅವಧಿಯನ್ನು ಮುರಿದಿದೆ. ದೀರ್ಘ ಸಮಯದವರೆಗೆ ಬಾಕಿ ಉಳಿದ ತೆಲುಗಿನ ಏಕೈಕ ಸಿನಿಮಾ ಎಂಬ ಕುಖ್ಯಾತಿಗೆ ಗುರಿಯಾಗಿದೆ.

ಅಂದಹಾಗೆ, ‘ಹರಿಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣ ಆರಂಭವಾದ ಬಳಿಕ ಹಲವು ಭಾರಿ ಚಿತ್ರ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ. ಮತ್ತೆ-ಮತ್ತೆ ಮುಂದೂಡಲಾಗಿದೆ. ಈಗಲೂ, ಮೇ 9ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಪವನ್ ಕಲ್ಯಾಣ್ ಚಿತ್ರೀಕರಣವನ್ನು ಮುಗಿಸದ ಕಾರಣ, ಮತ್ತೆ ಮುಂದೂಡಲಾಗಿದೆ.

ಚಿತ್ರತಂಡವು ಚಿತ್ರೀಕರಣ ಮುಗಿಸಬೇಕು. ಬಳಿಕ, ಪೋಸ್ಟ್‌-ಪ್ರೊಡಕ್ಷನ್ ಕೆಲಸಗಳನ್ನು ನಡೆಸಬೇಕು. ಪ್ರಚಾರ ಮಾಡಬೇಕು. ಹೀಗಾಗಿ, ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ.

ಪವನ್ ಕಲ್ಯಾಣ್‌ ಅವರು ‘ಹರಿಹರ ವೀರ ಮಲ್ಲು’ ಸಿನಿಮಾ ಚಿತ್ರೀಕರಣವನ್ನು ವಿಳಂಬ ಮಾಡಿರುವುದು ಮಾತ್ರವಲ್ಲದೆ, ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದು, ಈವರೆಗೂ ಚಿತ್ರೀಕರಣದಲ್ಲಿ ಭಾಗಿಯೇ ಆಗಿಲ್ಲ. ತೆಲುಗು ನಿರ್ದೇಶಕ ಹರೀಶ್ ಶಂಕರ್ ನಿರ್ದೇಶನದ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಅವರದ್ದು ಮುಖ್ಯಭೂಮಿಕೆ ಪಾತ್ರ. ಸಿನಿಮಾದ ಚಿತ್ರೀಕರಣ ಸೆಟ್ಟೇರಿ, ಹಲವಾರು ದೃಶ್ಯಗಳ ಚಿತ್ರೀಕರಣ ನಡೆದಿದೆ. ಆದರೆ, ಚಿತ್ರತಂಡಕ್ಕೆ ಪವನ್ ಕಲ್ಯಾಣ್‌ ಲಭ್ಯವಾಗುತ್ತಿಲ್ಲ. ಹೀಗಾಗಿ, ಆ ಸಿನಿಮಾದ ಚಿತ್ರೀಕರಣ ಕೂಡ ಹಲವು ದಿನಗಳಿಂದ ನಿಂತಲ್ಲೇ ನಿಂತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...