ಅಜಿತ್ ಪವಾರ್ ಸಾವು; ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಂತಾಪ

Date:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು,“ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಹಲವರು ಮೃತಪಟ್ಟ ಸುದ್ದಿ ತೀವ್ರ ಹೃದಯವಿದ್ರಾವಕವಾಗಿದೆ. ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಭರಿಸಲಾಗದ ನಷ್ಟವಾಗಿದೆ. ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ಅವರು ನೀಡಿದ ವಿಶೇಷ ಕೊಡುಗೆಗಾಗಿ ಅವರು ಯಾವಾಗಲೂ ಸ್ಮರಿಸಲ್ಪಡುವರು ” ಎಂದು ಹೇಳಿದ್ದಾರೆ.

ಮೋದಿ ಕೂಡ ಸಂತಾಪ ಸೂಚಿಸಿದ್ದು, “ಅಜಿತ್ ಪವಾರ್ ಅವರು ಜನ ನಾಯಕರಾಗಿದ್ದರು. ತಳಮಟ್ಟದ ಜನರ ಜೊತೆ ಸಂಪರ್ಕ ಹೊಂದಿದ್ದರು. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವ ಎಂದು ಅವರು ಗೌರವಿಸಲ್ಪಟ್ಟಿದ್ದರು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರಿಗಿದ್ದ ಉತ್ಸಾಹ ಕೂಡ ಗಮನಾರ್ಹವಾಗಿದೆ. ಅವರ ಅಕಾಲಿಕ ನಿಧನವು ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, “ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರಂತ ಸಾವು ತೀವ್ರ ದುಃಖ ಉಂಟುಮಾಡಿದೆ. ಅವರ ಸಾವಿನಿಂದ ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬ, ಸಹೋದ್ಯೋಗಿಗಳು ಹಾಗೂ ಬೆಂಬಲಿಗರಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಪ್ರೀತಿಪಾತ್ರರಿಗೆ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ತುಂಬಲಿ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...