ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಮುಂದಿನ ವರ್ಷ ನಿರ್ಧಾರ: ಸಿದ್ದರಾಮಯ್ಯ

Date:

  • ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ
  • ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನೆರವು

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ. ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡುತ್ತದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

“1977 ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳು ಸಮುದಾಯದ ಹಿತಕ್ಕಾಗಿ ಮೊದಲ ಸಭೆ ನಡೆಯಿತು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ” ಎಂದರು.

ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಮೀನುಗಾರ ಸಮುದಾಯಕ್ಕೆ ಮತ್ತು ಸಮುದಾಯದ ಮಕ್ಕಳಿಗೆ ನೀಡಿರುವ ಸರ್ಕಾರದ ಸವಲತ್ತುಗಳನ್ನು ವಿವರವಾಗಿ ಹೆಸರಿಸಿದರು.

ಸಿಎಂ ಡಿ ಕೆ ಶಿವಕುಮಾರ್​ಗೆ ಸ್ವಾಗತ!

ಸ್ವಾಗತ ಭಾಷಣ ವೇಳೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಸಣ್ಣ ಎಡವಟ್ಟು ಮಾಡಿಕೊಂಡರು. ಡಿಸಿಎಂ ಹೇಳುವ ಬದಲಿಗೆ ಸಿಎಂ ಡಿ ಕೆ ಶಿವಕುಮಾರ್​ಗೆ ಸ್ವಾಗತ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...