ವಾಲ್ಮೀಕಿ ಸಮುದಾಯದ ನಿಯೋಗ ದೆಹಲಿಗೆ ಹೋಗಲು ತೀರ್ಮಾನ: ಸಚಿವ ಸತೀಶ್‌ ಜಾರಕಿಹೊಳಿ

Date:

ಇಬ್ಬರು ವಾಲ್ಮೀಕಿ ಸಮುದಾಯದವರನ್ನೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಹೀಗಾಗಿ, ವಾಲ್ಮೀಕಿ ಸಮುದಾಯದ ನಾಯಕರಿಗೆ ಮರಳಿ ಸಚಿವ ಸ್ಥಾನ ನೀಡಬೇಕು ಎಂದು ಕೇಳಲು ನಾವು ದೆಹಲಿಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಿದ ಬೆನ್ನಲ್ಲೇ ಅಸಮಾಧಾನಗೊಂಡಿರುವ ವಾಲ್ಮೀಕಿ ಸಮುದಾಯದ ಶಾಸಕರು ಸಭೆ ಸೇರಿ ಬುಧವಾರ ಚರ್ಚಿಸಿದರು. ಸಭೆಯ ಬಳಿಕ ಸತೀಶ್‌ ಜಾರಕಿಹೊಳಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

“ತೆರವಾದ ಸಚಿವ ಸ್ಥಾನವನ್ನು ಅದೇ ವಾಲ್ಮೀಕಿ ಸಮುದಾಯದವರಿಗೇ ನೀಡಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಲು ಸಮುದಾಯದ ನಿಯೋಗ ಸಿದ್ಧವಾಗಿದೆ. ಕೆ.ಎನ್. ರಾಜಣ್ಣ ದಿಲ್ಲಿಗೆ ಹೋಗುವುದು ಬೇರೆ, ನಾವು ನಿಯೋಗ ಹೋಗುವುದು ಬೇರೆ. ಅದೇ ರೀತಿ, ಪಕ್ಷದ ಹೋರಾಟವೇ ಬೇರೆ ಸಮುದಾಯದ ಹೋರಾಟವೇ ಬೇರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಷಡ್ಯಂತ್ರದ ಬಗ್ಗೆ ಸಮಯ ಬಂದಾಗ ಹೇಳುವುದಾಗಿ ರಾಜಣ್ಣ ಹೇಳಿದ್ದಾರಲ್ಲಾ ಎಂದು ಪ್ರಶ್ನಿಸಿದಾಗ, “ಯಾವಾಗ ಹೇಳುತ್ತಾರೆ ಎಂಬುದನ್ನು ಕಾದು ನೋಡೋಣ. ಈಗ ರಾಜಣ್ಣ ಅಧಿಕಾರದಲ್ಲಿಲ್ಲ. ಅವರಿಗೆ ಧೈರ್ಯ ಹೇಳಿದ್ದೇವೆ. ಅವರಿಗೆ ಬೇಸರ ಏನಿಲ್ಲ. ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ’ ಎಂದು ಹೇಳಿದರು.

ವಾಲ್ಮೀಕಿ ಸಮುದಾಯದವರು ಸೇರಿದ ಸಭೆಯಲ್ಲಿ ಸ್ವತಃ ಕೆ.ಎನ್. ರಾಜಣ್ಣ ಸೇರಿದಂತೆ ಚಳ್ಳಕೆರೆ ಶಾಸಕ ರಘುಮೂರ್ತಿ, ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ, ಮಸ್ಕಿಯ ಬಸನಗೌಡ ತುರುವೀಹಾಳ, ಎಚ್.ಡಿ. ಕೋಟೆಯ ಅನಿಲ್ ಚಿಕ್ಕಮಾದು, ಮಾಯಕೊಂಡದ ಬಸವಂತಪ್ಪ, ಗುಂಡ್ಲುಪೇಟೆಯ ಗಣೇಶ್ ಪ್ರಸಾದ್, ಪಾವಗಡದ ವೆಂಕಟೇಶ್, ಕೆ.ಆರ್. ನಗರದ ರವಿಶಂಕ‌ರ್, ಚಾಮರಾಜದ ಹರೀಶಗೌಡ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...