ಎದುರಾಳಿಗೆ ನನಗಿಂತ ಅಧಿಕ ಮತ ಸಿಕ್ಕಿದೆ: ಕೋರ್ಟ್‌ ಮೆಟ್ಟಿಲೇರಿದ ಪಂಚಾಯತ್ ಚುನಾವಣೆಯ ಘೋಷಿತ ವಿಜೇತೆ!

Date:

ಚುನಾವಣಾ ಅಧಿಕಾರಿಯಿಂದ ವಿಜಯ ಪ್ರಮಾಣಪತ್ರವನ್ನು ಪಡೆದ ಉತ್ತರಾಖಂಡ ತರ್ಕುಲಿ ಗ್ರಾಮ ಪಂಚಾಯತ್‌ನ ಘೋಷಿತ ವಿಜೇತೆಯೊಬ್ಬರು “ನನ್ನ ಎದುರಾಳಿಯೇ ನಿಜವಾದ ವಿಜೇತ” ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ವಿಧಾನಸಭಾ ಕ್ಷೇತ್ರದ ಭಾಗವಾಗಿರುವ ತರ್ಕುಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಹುದ್ದೆಗೆ ಚುನಾವಣೆ ನಡೆದಿದ್ದು ಫಲಿತಾಂಶ ಪ್ರಕಟವಾಗಿದೆ. ಕಾಜಲ್ ಬಿಶ್ಟ್ ಅವರನ್ನು ವಿಜೇತೆ ಎಂದು ಚುನಾವಣಾ ಅಧಿಕಾರಿಗಳು ಘೋಷಿಸಿದ್ದು ಅವರಿಗೆ ವಿಜಯ ಪ್ರಮಾಣಪತ್ರವನ್ನೂ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ಖಾಸಗಿ ಹೆಲಿಕಾಪ್ಟರ್ ಪತನ; ಐವರು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಜಲ್ ಬಿಶ್ಟ್ 103 ಮತಗಳನ್ನು ಪಡೆದರೆ, ಅವರ ಎದುರಾಳಿ ಸುಮಿತ್ ಕುಮಾರ್ 106 ಮತಗಳನ್ನು ಪಡೆದಿದ್ದಾರೆ. ಆದರೆ ಬಿಶ್ಟ್ ಅವರನ್ನು ವಿಜೇತೆ ಎಂದು ಘೋಷಿಸಲಾಗಿದ್ದು ಗೊಂದಲ ಉಂಟಾಗಿತ್ತು. ಆದರೆ ಚುನಾವಣಾ ಅಧಿಕಾರಿಗಳ ತಪ್ಪನ್ನು ಕಾಜಲ್ ಬಿಶ್ಟ್ ಅವರೇ ತಿದ್ದಿದ್ದಾರೆ. ಅಷ್ಟು ಮಾತ್ರವಲ್ಲದೇ ಈ ವಿಚಾರದಲ್ಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

“ನಾನು ಚುನಾವಣೆಯಲ್ಲಿ ಗೆಲ್ಲಲಿಲ್ಲ, ನಾನು ಸೋತಿದ್ದೇನೆ ಎಂದು ನಾನು ಚುನಾವಣಾ ಅಧಿಕಾರಿಗೆ ಹೇಳಿದೆ. ನನ್ನ ಎದುರಾಳಿಗೆ ನನಗಿಂತ ಹೆಚ್ಚುವರಿ ಮೂರು ಅಧಿಕ ಮತಗಳು ಲಭಿಸಿದೆ. ಆದ್ದರಿಂದ ಪ್ರಮಾಣಪತ್ರವನ್ನು ನಿಜವಾದ ವಿಜೇತರಿಗೆ ನೀಡಬೇಕು”ಎಂದು ಬಿಶ್ಟ್ ಹೇಳಿದ್ದಾರೆ.

ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ವಿಷಯ ಬಗೆಹರಿಯದ ಕಾರಣ ಬಿಶ್ಟ್ ಕೋರ್ಟ್ ಕದ ತಟ್ಟಿದ್ದಾರೆ. ಬಿಶ್ಟ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅನುರಾಗ್ ಆರ್ಯ ಅವರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿಶ್ಟ್ ಅರ್ಜಿಯನ್ನು ವಿಚಾರಣೆ ಸ್ವೀಕರಿಸಿದ ಎಸ್‌ಡಿಎಂ, 30 ದಿನಗಳಲ್ಲಿ ಮತಗಳನ್ನು ಮರುಎಣಿಕೆ ಮಾಡುವಂತೆ ಚುನಾವಣಾ ಅಧಿಕಾರಿಗೆ ಆದೇಶಿಸಿದೆ. ಮರುಎಣಿಕೆಯ ದಿನಾಂಕವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...