ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಪಾಠ ಕಲಿಸಿ: ಸಿಎಂ ಸಿದ್ದರಾಮಯ್ಯ

Date:

ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1,200 ಕೋಟಿ ರೂ. ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಸಂಡೂರು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಸಂಡೂರು ಜನತೆಗೆ ಅರ್ಪಿಸಿ ಮಾತನಾಡಿದರು.

“ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು. ಈ.ತುಕಾರಾಮ್ ಅವರು ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ.ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ” ಎಂದು ಸಿಎಂ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 56,000 ಕೋಟಿ ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಬಿಜೆಪಿ ಯವರು ಸುಳ್ಳುಗಳನ್ನು ಎರಚುತ್ತಾ ಕುಳಿತಿದೆ. ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಈ.ತುಕಾರಾಮ್ ಅವರು 1200 ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

“ಸಂಡೂರಿನ ಜನರ ತೆರಿಗೆ ಹಣಕ್ಕೆ, ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರ ಸರ್ಕಾರ ನಿರಂರವಾಗಿ ವಂಚಿಸುತ್ತಿದೆ. ನಿಮಗೆ, ನಮಗೆ ಕೇಂದ್ರದಿಂದ ಬರಬೇಕಾದ ಹಣವನ್ನು ಕೊಡಿ ಎಂದು ಮೋದಿಗೆ ಕೇಳುವ ಧೈರ್ಯ ಬಿಜೆಪಿಗೆ ಇಲ್ಲ, ವಿಜಯೇಂದ್ರಗೆ ಇಲ್ಲ. ಇದು ಸಂಡೂರಿನ ಜನತೆಗೆ, ರಾಜ್ಯದ ಜನತೆಗೆ ಬಗೆದ ದ್ರೋಹ ಅಲ್ಲವೇ” ಎಂದು ಸಿಎಂ ಕೇಳಿದರು.

“ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಆದರೆ ನಮ್ಮ ಪಾಲು ವಾಪಾಸ್ ಕೊಡುವುದರಲ್ಲಿ ಕೇಂದ್ರ ಸರ್ಕಾರ ಕೊನೆ ಸ್ಥಾನದಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ-ಸಂಸದರೂ ಆದ ಈ.ತುಕಾರಾಂ, ಶಾಸಕರುಗಳಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ಶ್ರೀನಿವಾಸ್, ನಾಗರಾಜ್, ನಾರಾ ಭರತ್ ರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಮೆಹರೂಜ್ ಖಾನ್, ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಹಿರಿಯ ನಾಯಕರಾದ ಅಲ್ಲಂ ವೀರಭದ್ರಪ್ಪ, ಲಿಡ್ಕರ್ ಅಧ್ಯಕ್ಷರಾದ ನಾಗರಾಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...