ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Date:

ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯರ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಗೋಕಾಕ್‌ನಲ್ಲಿ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು.

“ಬೆಲೆಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019ರಲ್ಲಿ ಭಾರತೀಯರಲ್ಲಿ ಭ್ರಮೆಯನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಮೋದಿ ಒಂದೇ ಒಂದು ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿ ಬಾರಿ ಕೇವಲ ಭಾವನಾತ್ಮಕವಾಗಿ ಜನರನ್ನು ಪ್ರಚೋದಿಸುವಂತೆ ಸುಳ್ಳುಗಳನ್ನು ಹೇಳುತ್ತಿಲೇ ಇದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಸಂಪೂರ್ಣ ಹತಾಶರಾಗಿ ಹೆಚ್ಚೆಚ್ಚು ಸುಳ್ಳುಗಳನ್ನು ಹೇಳಿ ಹೇಳಿ ಎಷ್ಟು ಸಾಧ್ಯವೋ ಅಷ್ಟು ಭಾರತೀಯರ ದಾರಿತಪ್ಪಿಸಿ ಲಾಭ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯೇತರರು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ , ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ” ಎಂದು ಹೇಳಿದರು.

ಮಹಿಳೆಯರ ಖಾತೆಗೆ ವರ್ಷಕ್ಕೆ ಒಂದು ಲಕ್ಷ

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ಮೋದಿಯವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ” ಎಂದರು.

“ಪ್ರತಿ ಭಾರತೀಯರ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀವಿ ಎಂದು ಪುಸಲಾಯಿಸಿ, ಯಾಮಾರಿಸಿ ಹತ್ತು ವರ್ಷಗಳಾದರೂ ಈವರೆಗೆ ಯಾರ ಖಾತೆಗೂ 15ರೂ. ಕೂಡ ಬಂದಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದವರು, ನಿರುದ್ಯೋಗಿ ಯುವಕರು ಕೆಲಸ ಕೊಡಿ ಎಂದರೆ ಪಕೋಡ ಮಾರಿ ಎಂದು ಅತ್ಯಂತ ಬೇಜವಾಬ್ದಾರಿ ಉತ್ತರ ನೀಡಿದರು. ಇವರು ಈ ದೇಶದ ಪ್ರಧಾನಿಯಾಗಲು ಯೋಗ್ಯರೇ?” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...