ಚುನಾವಣೆಯಲ್ಲಿ ಸೋಲು | ಸಿದ್ದಗಂಗಾ ಶ್ರೀಗಳ ಮುಂದೆ ಮಂಡಿಯೂರಿ ನೋವು ತೋಡಿಕೊಂಡ ವಿ ಸೋಮಣ್ಣ

Date:

ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು.

ಶ್ರೀಗಳ ಮುಂದೆ ಮಂಡಿಯೂರಿ ಕೂತ ಸೋಮಣ್ಣ, ಕಳೆದ ವಿಧಾನಸಭೆ ಚುನಾವಣೆಯ ಸೋಲು ಸೇರಿದಂತೆ ಎಲ್ಲ ಬೆಳವಣಿಗೆಗಳ ಬಗ್ಗೆ ತಮ್ಮ ನೋವು ತೋಡಿಕೊಂಡರು.

somanna 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಕುಮಾರ ಶ್ರೀಗಳ ಗದ್ದಿಗೆಗೆ ಸೋಮಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿದ್ದಗಂಗಾ ಶ್ರೀಗಳನ್ನು ಭೇಟಿಯಾದ ವಿ.ಸೋಮಣ್ಣ, ಕಳೆದ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧೆ ಮಾಡಿಯೂ ಸೋತಿದ್ದಕ್ಕೆ ಕಣ್ಣೀರು ಹಾಕಿದರು.

ತುಮಕೂರಿನ ಸ್ಥಳೀಯ ಮುಖಂಡರೊಬ್ಬರು ‘ನೀವು ಗೋವಿಂದರಾಜು ಕ್ಷೇತ್ರ ಬಿಟ್ಟು ಹೋಗಬಾರದಿತ್ತು’ ಎಂದು ಮಾತು ಆರಂಭಿಸಿದಾಗ ಶ್ರೀಗಳ ಎದುರು ಅಳಲು ತೋಡಿಕೊಂಡ ಸೋಮಣ್ಣ, “ಹೌದು, ನಾನು ಮಾಡಿದ ಮಹಾ ಅಪರಾಧ ಅದು” ಎಂದು ಹೇಳಿದರು.

“ಅಮಿತ್ ಶಾ ಅವರು ಬಂದು ಎರಡೂವರೆ ಗಂಟೆ ಮನೆಯಲ್ಲಿ ಕೂತ್ಕೊಂಡು ಜೀವ ತೆಗೆದರು, ಏನು ಮಾಡಲಿ. ಅವರೇ ನಿಂತುಕೊ ಅಂದ್ಮೇಲೆ ನಾನು ಏನ್ ಮಾಡಬೇಕು. ಏನ್ ಮಾಡಲಿ ಹೇಳಿ ಸ್ವಾಮೀಜಿ. ಆಗ ನಾನು ಇಲ್ಲ ಅಂತಾ ಹೇಳಿದೆ. ಪಿಎಂ ಮೋದಿ ದೆಹಲಿಗೆ ಕರೆಸಿದರು. ನಾಲ್ಕು ದಿನ ಅಲ್ಲೇ ಇಟ್ಕೊಂಡ್ರು. ನೀನು ನಿಂತುಕೊ ಅಂತಾ ಹೇಳಿದಾಗ ಏನ್ ಮಾಡಬೇಕು” ಎಂದು ಹತಾಶೆಯಿಂದ ಬಿಜೆಪಿಯ ಹರಕೆಯ ಕುರಿಗಳಾದ ಬಗ್ಗೆ ಮನದಾಳದ ಮಾತುಗಳನ್ನು ಬಹಿರಂಗವಾಗಿ ಹೇಳಿದರು.

ಇದನ್ನು ಓದಿ: ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲ್ಲ, ತಿಹಾರ್ ಜೈಲಿಗೆ ಹೋಗ್ತಾರೆ: ಕೆ ಎಸ್ ಈಶ್ವರಪ್ಪ

ಮಠಕ್ಕೆ ಭೇಟಿ ನೀಡಿದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಣ್ಣ, “ನಾನು ಮಠದ ಭಕ್ತ. 44 ವರ್ಷಗಳ ಸಂಬಂಧವಿದೆ. ಡಿಸೆಂಬರ್ 6 ರಂದು ಗುರುಭವನ ಲೋಕಾರ್ಪಣೆ ಮಾಡುತ್ತೇವೆ. ಗುರುಭವನ ನಿರ್ಮಾಣ ಮಾಡುವ ಪುಣ್ಯ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಸಚಿವರಾದ ರಾಜಣ್ಣ, ಪರಮೇಶ್ವರ್ ಇರುತ್ತಾರೆ. ಅದಕ್ಕೆ ರಾಜಕೀಯ ಮಾಡೋವಷ್ಟು ಕೀಳು ಕೆಲಸ ನಾನು ಮಾಡಲ್ಲ. ಈ ಕಾರ್ಯಕ್ರಮಕ್ಕೆ ರಾಜಕೀಯ ಲೇಪನ ಬೇಡ” ಎಂದು ತಿಳಿಸಿದರು.

“ನಾನು ಡಿ.6 ನೇ ತಾರೀಖಿನ ನಂತರ 7, 8, 9, 10ರೊಳಗೆ ದೆಹಲಿಗೆ ಹೋಗಿ ನನ್ನ ಭಾವನೆ ವ್ಯಕ್ತಪಡಿಸುತ್ತೇವೆ. ಯತ್ನಾಳ್, ಅರವಿಂದ ಬೆಲ್ಲದ್, ರಮೇಶ್ ಜಾರಕಿಹೊಳಿ ಸೇರಿ ಹೈಕಮಾಂಡ್‌ಗೆ ನಮ್ಮ ನೋವು ಹೇಳುತ್ತೇವೆ. ನಾವು ಹಿರಿಯರು. ನಮ್ಮದೇ ಅನುಭವ, ಸೇವೆ ಇದೆ, ಆಲೋಚನೆ ಇದೆ. ಮಗು ಅತ್ತರೆ ಮಾತ್ರ ತಾಯಿ ಹಾಲು ಕೊಡೋದು. ಹಾಗಾಗಿ ನಮ್ಮ ನೋವನ್ನು ಹೈಕಮಾಂಡ್‌ಗೆ ಹೇಳುತ್ತೇವೆ” ಎಂದು ಪರೋಕ್ಷವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವುದಕ್ಕೆ ಸೋಮಣ್ಣ ಅಸಮಾಧಾನ ಹೊರಹಾಕಿದರು.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ವಿ ಸೋಮಣ್ಣ, ಎರಡು ಕ್ಷೇತ್ರದಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ್ದರು.

ಸೋಮಣ್ಣ ಮಠದ ಭೇಟಿಯ ವೇಳೆ ಅವರ ಪತ್ನಿ ಶೈಲಜಾ, ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಹಲವು ನಾಯಕರು ಜೊತೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...