ಲೋಕಸಭೆ ಚುನಾವಣೆ| ಇದು ಮೋದಿಯವರ ಅಹಂಕಾರದ ಸೋಲು: ಮಲ್ಲಿಕಾರ್ಜುನ ಖರ್ಗೆ

Date:

ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಲೋಕಸಭೆ ಚುನಾವಣೆಯು ತಮ್ಮ ಹೆಸರಲ್ಲಿ ಬಿಜೆಪಿಗೆ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನಾದೇಶವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಕಾಂಗ್ರೆಸ್ ಖಾತೆಯನ್ನು ಸೀಝ್ ಮಾಡಿತು. ಏಜೆನ್ಸಿಗಳನ್ನು ಬಳಿಸಿತು. ಆದರೆ ಸಂವಿಧಾನದ ಉಳಿವಾಗಿದೆ ಎಂದು ಹೇಳಿದ ಖರ್ಗೆ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ?  ಅಮೇಥಿಯಲ್ಲಿ ಮುರಿದ ಸ್ಮೃತಿ ಇರಾನಿಯ ಅಹಂಕಾರ; ಎರಡೂ ಕಡೆ ಗೆದ್ದ ರಾಹುಲ್‌

ಜೊತೆಗೆ ಇಂಡಿಯಾ ಕೂಟಕ್ಕೂ ಧನ್ಯವಾದ ತಿಳಿಸಿದ ಖರ್ಗೆ, ಸಂವಿಧಾನ ಉಳಿವಿಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಈ ಲೋಕಸಭೆ ಚುನಾವಣೆ ಬರೀ ಒಂದು ಪಕ್ಷದ ವಿರುದ್ಧ ನಡೆಸಿದ ಸ್ಪರ್ಧೆಯಲ್ಲ, ಬಿಜೆಪಿ, ಹಿಂದೂಸ್ತಾನದ ಸಂಸ್ಥೆಗಳು, ಸಿಬಿಐ, ಇಡಿ ವಿರುದ್ಧದ ಹೋರಾಟವಾಗಿದೆ. ಯಾಕೆಂದರೆ ಈ ಸಂಸ್ಥೆಗಳನ್ನು ಅಮಿತ್‌ ಶಾ, ನರೇಂದ್ರ ಮೋದಿಯವರು ಹಿಡಿತದಲ್ಲಿರಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?   ರಾಯಬರೇಲಿಯಲ್ಲಿ ರಾಹುಲ್ ಗಾಂಧಿಗೆ ಗೆಲುವು, ವಯನಾಡಿನಲ್ಲಿ ಭಾರಿ ಮುನ್ನಡೆ

ಇನ್ನು ಇಂಡಿಯಾ ಒಕ್ಕೂಟ ವಿಪಕ್ಷವಾಗಿರುತ್ತದೆಯೇ ಅಥವಾ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ನಾವು ನಮ್ಮ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೊಂದಿಗೆ ನಾಳೆ ಸಭೆ ನಡೆಸುತ್ತೇವೆ. ಈ ಪ್ರಶ್ನೆಗಳನ್ನು ಅಲ್ಲಿಯೇ ಎತ್ತಲಾಗುವುದು ಮತ್ತು ಅದಾದ ಬಳಿಕ ಉತ್ತರಿಸಲಾಗುವುದು. ನಾವು ಮಿತ್ರ ಪಕ್ಷಕ್ಕೆ ಗೌರವ ನೀಡುತ್ತೇವೆ, ಅವರೊಂದಿಗೆ ಚರ್ಚಿಸದೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...