ಸಮುದಾಯಕ್ಕೆ ವಂಚಿಸಿರುವ ಬಿಜೆಪಿ ಸೋಲಿಸಿ: ಒಳಮೀಸಲಾತಿ ಹೋರಾಟಗಾರರ ಕರೆ

Date:

“10 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದರೂ ಬಿಜೆಪಿ ಸರ್ಕಾರದಿಂದ ನಮ್ಮ ಸಮಾಜಗಳಿಗೆ ಬೆಲೆ ಸಿಕ್ಕಿಲ್ಲ, ಈಗ ಅಧಿಕಾರ ಬಂದ ಮೇಲೆ ನ್ಯಾಯ ಒದಗಿಸುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸೋಣ” ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ರಾಜ್ಯ ಸಂಚಾಲಕರಾದ ಕೇಶವಮೂರ್ತಿ ಕರೆ ನೀಡಿದರು.

ಬೆಳಗಾವಿಯ ಸಾಹಿತ್ಯ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟವು ನಿರಂತರವಾಗಿ ನಡೆಯುತ್ತಿದೆ. ಅದರ ಪ್ರಯುಕ್ತ ನ್ಯಾಯಮೂರ್ತಿ ಉಷಾ ಮೆಹ್ರಾ ಸಮಿತಿ ರಚನೆಯಾಗಿತ್ತು. ಒಳಮೀಸಲಾತಿ ಜಾರಿಗೆ ಸಂವಿಧಾನಿಕ ತಿದ್ದುಪಡಿಯನ್ನು ಪ್ರಸ್ತಾಪಿಸಿತ್ತು. ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೆ ತರಲು ಕ್ರಮ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಹೇಳಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯು ಜನಾಂಗಕ್ಕೆ ಮನವಿ ಮಾಡುತ್ತದೆ ಎಂದರು.

ಮಾದಿಗ ದಂಡೋರದ ರಾಷ್ಟ್ರೀಯ ಅಧ್ಯಕ್ಷರಾದ ಮಂದಕೃಷ್ಣ ಮಾದಿಗ ಅವರು ಬಿಜೆಪಿಗೆ ಬೆಂಬಲ ನೀಡಿ ಹೇಳಿಕೆ ನೀಡಿರುವುದು ಖಂಡನೀಯ, ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಬಾರದು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಳ ಮೀಸಲಾತಿಯನ್ನು ಜಾರಿ ಮಾಡದೆ ಮತ್ತು ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ರದ್ದುಪಡಿಸಿ ಬಿಜೆಪಿ ಮೋಸ ಮಾಡಿದೆ. ಸಂವಿಧಾನವನ್ನು ಬದಲು ಮಾಡಲು ಹೊರಟಿರುವ ಬಿಜೆಪಿ ಪಕ್ಷಕ್ಕೆ ಮತ ಹಾಕದೆ ತಕ್ಕ ಪಠ ಕಲಿಸಿ ಬೇಕಾಗಿದೆ ಎಂದು ಆಗ್ರಹಿಸಿದರು.

ಸಮಿತಿಯ ಮುಖಂಡರಾದ ಗೋಪಿ ಬಳ್ಳಾರಿ, ಬಸವರಾಜ್ ಅರವೊಳಿ, ಯಲ್ಲಪ್ಪ ಹುಡಲಿ, ಶಂಕರ್ ದೊಡಮನಿ, ಪೆದ್ದನ್ನ ಅನಾಯಪುರ, ಸಂದೀಪ ಕುಲಕರ್ಣಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...