ಬ್ಯಾಂಕ್‌ಗೆ ಮೋಸ ಆರೋಪ; ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್

Date:

ಬ್ಯಾಂಕ್‌ ಸಾಲ ಮರುಪಾವತಿ ಮಾಡದೆ, ವಂಚಿಸುವ ಉದ್ದೇಶ ಹೊಂದಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಖಲಾಗಿದೆ.

ಬೆಳಗಾವಿಯ ಸೌಭಾಗ್ಯ, ಲಕ್ಷ್ಮಿ ಶುಗರ್ಸ್​​ ಲಿಮಿಟೆಡ್​​​ ಕಂಪನಿಯ ಅಧ್ಯಕ್ಷರಾಗಿದ್ದ ರಮೇಶ್​ ಜಾರಕಿಹೊಳಿ, ನಿರ್ದೇಶಕ ವಸಂತ್​ ವಿ ಪಾಟೀಲ್​ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್​ ಎ ಪಾವಡೆ ವಿರುದ್ಧ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನ ಮ್ಯಾನೇಜರ್‌ ರಾಜಣ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್​​ 420 (ವಂಚನೆ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಮೂವರು ಆರೋಪಿಗಳು ಸಕ್ಕರೆ ಕಾರ್ಖಾನೆ ಸ್ಥಾಪನೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಸಾಲಕ್ಕಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ್ದರು. ಬ್ಯಾಂಕ್ ವಿಧಿಸಿದ್ದ ಎಲ್ಲ ಷರತ್ತುಗಳಿಗೆ ಆರೋಪಿಗಳು ಒಪ್ಪಿಗೆಯನ್ನೂ ನೀಡಿದ್ದರು” ಎಂದು ದೂರಿನಲ್ಲಿ ಬ್ಯಾಂಕ್‌ ಮ್ಯಾನೇಜರ್ ರಾಜಣ್ಣ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿವಿಧ ಷರತ್ತುಗಳ ಮೇಲೆ ಅವರಿಗೆ ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ಅದರ ಸಮೂಹ ಬ್ಯಾಂಕ್​ಗಳಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ತುಮಕೂರು ಜಿಲಾ ಕೇಂದ್ರ ಸಹಕಾರ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ನೀಡಲಾಗಿದೆ. 2013ರ ಡಿಸೆಂಬರ್​​ 7ರಿಂದ 2017ರ ಮಾರ್ಚ್​ 31ರ ವರೆಗೆ ಹಂತ ಹಂತವಾಗಿ 232.88 ಕೋಟಿ. ರೂ. ಸಾಲ ಪಡೆದಿದ್ದಾರೆ. ಆದರೆ, ಆರೋಪಿಗಳು ಸಾಲವನ್ನು ಮರುಪಾವತಿಸಿಲ್ಲ. ಇದೂವರೆಗೆ, 439.7 ಕೋಟಿ ರೂ. ಸಾಲ ಪಾವತಿ ಬಾಕಿ ಉಳಿದಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅತಿಥಿ ಉಪನ್ಯಾಸಕರ ಗೌರವಧನ 5ರಿಂದ 8 ಸಾವಿರ ಹೆಚ್ಚಳಕ್ಕೆ ಸಿಎಂ ಸಮ್ಮತಿ

“ಸಾಲ ಪಡೆಯುವ ವೇಳೆ ಆರೋಪಿಗಳು ಸೌಭಾಗ್ಯ, ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರಾಗಿದ್ದರು. ಆದರೆ, ಸಾಲ ಪಡೆದ ಬಳಿಕ ಕಂಪನಿಯ ಜವಾಬ್ದಾರಿಯಿಂದ ಹೊರಬಂದಿದ್ದಾರೆ. ತಮ್ಮ ಸ್ಥಾನಗಳಿಗೆ ಬೇರೆಯವರನ್ನು ನೇಮಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನ​ ಷರತ್ತಿನ ಪ್ರಕಾರ, ಸಾಲವನ್ನು ಮಂಜೂರು ಮಾಡುವ ಸಮಯದಿಂದ ಸಾಲ ಮರುಪಾವತಿಯಾಗುವವರೆಗೆ ಬ್ಯಾಂಕ್​ನ ಅನುಮತಿ ಇಲ್ಲದೇ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ಬದಲಿಸುವಂತಿಲ್ಲ. ಆದರೆ, ಅವರು ನಿಯಮ ಬಾಹಿರವಾಗಿ ಅಧಿಕಾರಿಗಳನ್ನು ಬದಲಿಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಗಳು ಬ್ಯಾಂಕ್​ಗೆ ಸಾಲದ ಹಣವನ್ನು ಮರುಪಾವತಿ ಮಾಡದೆ, ಮೋಸ ಮಾಡಬೇಕೆಂಬ ಉದ್ದೇಶದಿಂದ ಬ್ಯಾಂಕ್​ಗೆ ಗಮನಕ್ಕೆ ತಾರದೇ, ಕಂಪನಿಯ ಆಡಳಿತ ಮಂಡಳಿಯಿಂದ ಹೊರಬಂದಿದ್ದಾರೆ. ಬ್ಯಾಂಕ್‌ಗೆ ನಂಬಿಕೆ ದ್ರೋಹ ಮಾಡಿ, ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...