ದೆಹಲಿ ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಬದಲು ಎಎಪಿ ಬೆಂಬಲಕ್ಕೆ ನಿಂತ ‘ಇಂಡಿಯಾ’ ಮಿತ್ರಪಕ್ಷಗಳು

Date:

ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ನಡುವೆ ‘ಇಂಡಿಯಾ’ ಒಕ್ಕೂಟದ ಇತರೆ ಮಿತ್ರಪಕ್ಷಗಳು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬದಲಾಗಿ ಎಎಪಿ ಬೆಂಬಕ್ಕೆ ನಿಂತಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.

ಇನ್ನು ದೆಹಲಿ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿದ ಬಳಿಕ ಪರಸ್ಪರ ವಾಗ್ದಾಳಿಗಳು ಕೂಡಾ ಹೆಚ್ಚಾಗಿದೆ. ಅದರಲ್ಲೂ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಕೇಜ್ರಿವಾಲ್ ಅವರನ್ನು ‘ರಾಷ್ಟ್ರ ವಿರೋಧಿ’ ಎಂದು ಕರೆದಿರುವುದು ಕೇಂದ್ರದಂತೆ ದೆಹಲಿಯಲ್ಲೂ ಮಿತ್ರತ್ವಕ್ಕೆ ಕಡಿವಾಣ ಹಾಕಿದೆ.

ಇದನ್ನು ಓದಿದ್ದೀರಾ? ಫೆಬ್ರವರಿ 5 ರಂದು ದೆಹಲಿ ವಿಧಾನಸಭೆ ಚುನಾವಣೆ: ಹೊಸ ದಾಖಲೆ ನಿರ್ಮಿಸಿದ ರಾಜೀವ್ ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಎಪಿಯನ್ನು ದೆಹಲಿಯಲ್ಲಿ ‘ವಿರೋಧಿ’ ಎಂದು ಕರೆದಿದ್ದಾರೆ. ಇದಾದ ಬೆನ್ನಲ್ಲೇ ಕೇಜ್ರಿವಾಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ನಾಯಕನ ಹೇಳಿಕೆಯು ಅವರ ಪಕ್ಷ ಮತ್ತು ಬಿಜೆಪಿ ಈಗ ಅಧಿಕೃತವಾಗಿ ಮೈತ್ರಿಯಲ್ಲಿದೆ ಎಂಬುದನ್ನು ದೃಢಪಡಿಸಿದೆ” ಎಂದು ಹೇಳಿದ್ದಾರೆ.

ಇದಾದ ಕೆಲವೇ ಸಮಯದ ನಂತರ ಕೇಜ್ರಿವಾಲ್‌ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಎಎಪಿಗೆ ಬೆಂಬಲ ನೀಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದಕ್ಕೂ ಒಂದು ದಿನಕ್ಕೂ ಮುನ್ನ ಎಎಪಿಗೆ ಬೆಂಬಲ ಘೋಷಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಧನ್ಯವಾದ ತಿಳಿಸಿದ್ದರು.

ಟಿಎಂಸಿ ಮತ್ತು ಎಸ್‌ಪಿ ಎರಡೂ ರಾಷ್ಟ್ರ ರಾಜಧಾನಿಯಲ್ಲಿ ಅಧಿಕ ಪ್ರಾಬಲ್ಯವನ್ನು ಹೊಂದಿಲ್ಲ. ಆದರೆ ಇದು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ಗೆ ಕೊಂಚ ಹಿನ್ನೆಡೆ ಉಂಟು ಮಾಡಿದೆ. ಈಗಾಗಲೇ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಸೋಲಿನ ಬಳಿಕ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳು ಕಾಂಗ್ರೆಸ್ ಅನ್ನು ಹೊಣೆಯಾಗಿಸಿದೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಎಎಪಿಯ ಅಂತಿಮ ಅಭ್ಯರ್ಥಿ ಪಟ್ಟಿ ಬಿಡುಗಡೆ

ಇನ್ನು ಇದಕ್ಕೂ ಮುನ್ನ ಅಶೋಕ್ ಗೆಹ್ಲೋಟ್ “ಎಎಪಿ ನಮ್ಮ ಎದುರಾಳಿ. ಎರಡು ಬಾರಿ ಗೆದ್ದ ನಂತರ ಅವರು ಭ್ರಮೆಯಲ್ಲಿದ್ದಾರೆ. ದೆಹಲಿಯಲ್ಲಿ ವಾತಾವರಣ ಬದಲಾಗಿದೆ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್ ಉತ್ತಮವಾಗಿ ಪ್ರಚಾರ ಮಾಡುತ್ತಿದೆ. ಉತ್ತಮ ಫಲಿತಾಂಶ ಬರುತ್ತದೆ ಎಂದು ನನಗೆ ಖಚಿತವಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನು ಮಮತಾ ವಿರುದ್ಧ ಆಗಾಗ ವಾಗ್ದಾಳಿ ನಡೆಸುವ ಮೂಲಕ ಸುದ್ದಿಯಾಗುತ್ತಾ ಬಂದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಟಿಎಂಸಿ ಜೊತೆ ಮೈತ್ರಿ ಮಾಡುವ ಎಎಪಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ದೆಹಲಿಯಲ್ಲಿ ಬಂಗಾಳಿಗಳಿಗೆ ಈಗಾಗಲೇ ಮಮತಾ ಅವರ ನಿರಂಕುಶಾಧಿಕಾರದ ಬಗ್ಗೆ ತಿಳಿದಿದೆ ಎಂದಿದ್ದಾರೆ.

ಇನ್ನು ಈಗಾಗಲೇ ಇಂಡಿಯಾ ಒಕ್ಕೂಟದ ನಿರ್ವಹಣೆಯನ್ನು ಮಾಡಲು ಪ್ರಬಲ ನಾಯಕತ್ವ ಬೇಕಿದೆ, ಅದನ್ನು ಮಮತಾ ಬ್ಯಾನರ್ಜಿ ನಿಭಾಯಿಸುತ್ತಾರೆ ಎಂದು ಟಿಎಂಸಿ ನಾಯಕರು ಹೇಳಿಕೊಂಡಿದ್ದಾರೆ. ಮಮತಾ ಕೂಡಾ ತನಗೆ ನಾಯಕತ್ವ ನೀಡಿದರೆ, ಪಶ್ಚಿಮ ಬಂಗಾಳದ ಸಿಎಂ ಆಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ನಿರ್ವಹಿಸುವುದಾಗಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...