ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

Date:

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ ನಡೆಯುತ್ತಿರುವ ‘ದೆಹಲಿ ಚಲೋ’ ರೈತ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ರೈತರು ದೆಹಲಿ ತಲುಪದಂತೆ ತಡೆಯಲು ಹರಿಯಾಣ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಭಾರೀ ಪ್ರಯತ್ನ ನಡೆಸುತ್ತಿವೆ. ರೈತರ ಮೇಲೆ ಟಿಯರ್ ಗ್ಯಾಸ್, ರಬ್ಬರ್‌ ಗುಂಡಿನ ದಾಳಿಗಳೂ ನಡೆದಿವೆ. ಈವರೆಗೆ, ಆರು ಮಂದಿ ರೈತರು ಸಾವನ್ನಪ್ಪಿದ್ದಾರೆ. ಆದರೂ, ಸರ್ಕಾರದ ದಮನಕ್ಕೆ ಬಗ್ಗದ ರೈತರು ಹೋರಾಟ ಮುಂದುವರೆಸಿದ್ದಾರೆ.

ರೈತರ ಹೋರಾಟದಲ್ಲಿ ಕರ್ನೈಲ್ ಸಿಂಗ್ (62), ಜ್ಞಾನ್ ಸಿಂಗ್ (63), ಮಂಜಿತ್ ಸಿಂಗ್ (72), ನರಿಂದರ್‌ಪಾಲ್ ಸಿಂಗ್ (43), ಶುಭಕರನ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ (23) ಅವರು ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಅಲ್ಲದೆ, ಸುಮಾರು 100ಕ್ಕೂ ಹೆಚ್ಚು ಮಂದಿ ರೈತರು ಗಾಯಗೊಂಡಿದ್ದಾರೆ. ಕಲವರು ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡಿದ್ದಾರೆ.

ಸಾವನ್ನಪ್ಪಿದ ರೈತರಿಗೆ ಹೋರಾಟದ ಸ್ಥಳದಲ್ಲೇ ಪ್ರತಿಭಟನಾನಿರತ ರೈತರು ಭಾನುವಾರ ಅಂತಿಮ ನಮನ ಸಲ್ಲಿಸಲು ಸಭೆ ನಡೆಸುತ್ತಿದ್ದಾರೆ. ಸಭೆಯ ನಂತರ ಹೋರಾಟದ ಮುಂದಿನ ರೂಪುರೇಷೆಗಳನ್ನು ನಿರ್ಧರಿಸಿ, ತಿಳಿಸುವುದಾಗಿ ರೈತ ಮುಖಂಡರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಕೇವಲ ಅಶ್ರುವಾಯು ಅಥವಾ ಲಘು ಲಾಠಿ ಪ್ರಹಾರದ ಪ್ರಶ್ನೆಯಲ್ಲ… ಅವರು (ಪೊಲೀಸರು) ವಿಷಕಾರಿ ಅನಿಲಗಳನ್ನು ಬಳಸಿದ್ದನ್ನು ನಾವು ನೋಡಿದ್ದೇವೆ. ಯುವ ರೈತ ಶುಭಕರನ್ ಅವರನ್ನು ಹೇಗೆ ಕಳೆದುಕೊಂಡಿದ್ದೇವೆ ಎಂಬುದು ಎಲ್ಲರಿಗೂ ತಿಳಿದಿದೆ. ಪ್ರಜಾಪ್ರಭುತ್ವದಲ್ಲಿ ಬುಲೆಟ್‌ಗಳನ್ನು ಹಾರಿಸುವುದು ಸಮರ್ಥನೆಯ ಸಂಗತಿಯೇ? ನಮ್ಮ ಆಂದೋಲನ ಮುಂದುವರಿಯುತ್ತದೆ. ಅದು ವಿಜಯದತ್ತ ಸಾಗುತ್ತದೆ” ಎಂದು ರೈತ ಮುಖಂಡ ಜಸ್ವಿಂದರ್ ಸಿಂಗ್ ಲೊಂಗೊವಾಲ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಕರೆ ಕೊಟ್ಟು ಆರಂಭಿಸಿದ ರೈತ ಹೋರಾಟಕ್ಕೆ, ಈಗ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬೆಂಬಲ ನೀಡಿವೆ. ಅನೇಕ ಸಂಘಟನೆಗಳು ಜೊತೆಗೂಡಿವೆ.

ರೈತರು 23 ಬೆಳೆಗಳಿಗೆ ಎಂಎಸ್‌ಪಿಯನ್ನು ಕಾನೂನಿ ಮೂಲಕ ಖಾತರಿಪಡಿಸಬೇಕು. ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕಿಂತ 50% ಲಾಭದೊಂದಿಗೆ ಎಂಎಸ್‌ಪಿ ನಿಗದಿಯಾಗಬೇಕು. 2020ರಲ್ಲಿ ಒಂದು ವರ್ಷಗಳ ಕಾಲ ನಡೆದ ರೈತ ಹೋರಾಟದಲ್ಲಿ ಸಾವನ್ನಪ್ಪಿದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ರೈತರು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಈವರೆಗೆ, ರೈತರು ಮತ್ತು ಸರ್ಕಾರದ ನಡುವೆ 4 ಸುತ್ತಿನ ಸಭೆ ನಡೆದಿದ್ದು, ನಾಲ್ಕೂ ಸಭೆಗಳು ವಿಫಲವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...