ಜೈಲಿನಿಂದಲೇ ಮೊದಲ ಆದೇಶ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನಕ್ಕೊಳಗಾಗಿದ್ದಾರೆ. ಅವರ ಬಂಧನ ಬಳಿಕ, ಜೈಲಿನಲ್ಲಿದ್ದುಕೊಂಡು ಮುಖ್ಯಮಂತ್ರಿಯಾಗಿ ಕೆಲಸ ಮಾಡಬಹುದೇ ಎಂಬ ಬರ್ಚೆ ನಡೆಯುತ್ತಿದೆ. ಇಂತಹ ಹೊತ್ತಿನಲ್ಲನೇ, ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ತಮ್ಮ ಮೊದಲ ಆದೇಶವನ್ನು ಹೊರಡಿಸಿದ್ದಾರೆ. ದೆಹಲಿಯ ನೀರು ಸರಬರಾಜು ಸಂಬಂಧ ದೆಹಲಿ ಸಚಿವೆ ಅತಿಶಿ ಅವರಿಗೆ ಪತ್ರದ ಮೂಲಕ ಆದೇಶ ಹರಿಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿರುವ ಅತಿಶಿ, ಮುಖ್ಯಮಂತ್ರಿ ನೀಡಿರುವ ಟಿಪ್ಪಣಿಯನ್ನು ಓದಿ ಕಣ್ಣೀರು ಹಾಕಿದ್ದಾರೆ. “ಅರವಿಂದ್ ಕೇಜ್ರಿವಾಲ್ ಅವರು ನನಗೆ ಪತ್ರದ ಮೂಲಕ ನಿರ್ದೇಶನ ಕಳುಹಿಸಿದ್ದಾರೆ. ಅದನ್ನು ಓದಿದ ನಂತರ ನಾನು ಕಣ್ಣೀರು ಹಾಕಿದೆ. ಜೈಲಿನಲ್ಲಿರುವ ಆ ವ್ಯಕ್ತಿ, ದೆಹಲಿ ನಿವಾಸಿಗಳ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಯೋಚಿಸುತ್ತಿದ್ದಾರೆ. ಇದನ್ನು ಕೇಜ್ರಿವಾಲ್ ಮಾತ್ರ ಮಾಡಲು ಸಾಧ್ಯ. ಏಕೆಂದರೆ, ಅವರು ತಮ್ಮನ್ನು ದೆಹಲಿಯ 2 ಕೋಟಿ ಜನರ ಕುಟುಂಬದ ಸದಸ್ಯನೆಂದು ಭಾವಿಸಿದ್ದಾರೆ” ಎಂದು ಅತಿಶಿ ಹೇಳಿದರು.

“ಅರವಿಂದ್ ಕೇಜ್ರಿವಾಲ್ ತಮ್ಮ ಆದೇಶದಲ್ಲಿ, ‘ದೆಹಲಿಯ ಕೆಲವು ಪ್ರದೇಶಗಳು ನೀರು ಸರಬರಾಜು ಮತ್ತು ಒಳಚರಂಡಿ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ನಾನು ಚಿಂತಿಸುತ್ತಿದ್ದೇನೆ. ನಾನು ಜೈಲಿನಲ್ಲಿರುವುದರಿಂದ ಜನರು ಯಾವುದೇ ಸಮಸ್ಯೆ ಎದುರಿಸಬಾರದು. ಬೇಸಿಗೆ ಬಂದಿದೆ, ಆದ್ದರಿಂದ ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ಸಾಕಷ್ಟು ನೀರು ಒದಗಿಸಿ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನ ನೀಡಿ. ಜನರು ತಮ್ಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಪಡೆಯಬೇಕು. ಅಗತ್ಯವಿದ್ದರೆ ಲೆಫ್ಟಿನೆಂಟ್ ಗವರ್ನರ್ ಅವರು ನಿಮಗೆ ಸಹಾಯ ಮಾಡುತ್ತಾರೆ’ ಎಂದಿದ್ದಾರೆ. ಇಂದಿಗೂ ಕೇಜ್ರಿವಾಲ್ ಜನರ ಬಗ್ಗೆ ಯೋಚಿಸುತ್ತಿದ್ದಾರೆ” ಎಂದು ಅತಿಶಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಬಿಜೆಪಿಗೆ ಹೇಳ ಬಯಸುವುದೇನೆಂದರೆ, – ನೀವು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ಜೈಲಿಗೆ ಹಾಕಬಹುದು. ಆದರೆ, ದೆಹಲಿಯ ಜನರ ಮೇಲಿನ ಅವರ ಪ್ರೀತಿ ಮತ್ತು ಕರ್ತವ್ಯ ಪ್ರಜ್ಞೆಯನ್ನು ನೀವು ಜೈಲಿನಲ್ಲಿಡಲು ಸಾಧ್ಯವಿಲ್ಲ. ಕೇಜ್ರಿವಾಲ್ ಜೈಲಿನಲ್ಲಿರಬಹುದು. ಆದರೆ, ಕೆಲಸ ನಿಲ್ಲುವುದಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?: ಚುನಾವಣಾ ಬಾಂಡ್ | ಬ್ಯಾಂಕ್‌ ಮೂಲಕ ಲಂಚ ನೀಡಬಹುದೆಂದು ಖಚಿತಪಡಿಸಿದೆ: ಕಾಂಗ್ರೆಸ್‌

ದೆಹಲಿ ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗುರುವಾರ ರಾತ್ರಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ ಶುಕ್ರವಾರ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದೆ. ತಮ್ಮ ಬಂಧನ ಮತ್ತು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದೇ ಪ್ರಕರಣದಲ್ಲಿ ಎಎಪಿಯ ನಾಯಕ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಹಾಗೂ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ಇಡಿ ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...