ಪೌರತ್ವ ಸಿಗುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಆರೋಪ: ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

Date:

ಪೌರತ್ವ ಸಿಗುವ ಮುನ್ನವೇ 1980-81ರ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ್ದಂತೆ ದೆಹಲಿ ಕೋರ್ಟ್ ಸೋನಿಯಾಗೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಪರಿಷ್ಕರಣಾ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ರೌಸ್ ಅವೆನ್ಯೂದಲ್ಲಿರುವ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರ ವಿಕಾಸ್ ತ್ರಿಪಾಠಿ ಪರವಾಗಿ ಹಾಜರಾದ ಹಿರಿಯ ವಕೀಲ ಪವನ್ ನಾರಂಗ್, ಭಾರತೀಯ ನಾಗರಿಕರಾಗುವ ಮೊದಲು ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಗಂಭೀರ ಅಕ್ರಮ ನಡೆಸಲಾಗಿದೆ ಎಂಬ ಬಗ್ಗೆ ದಾಖಲೆಗಳಿವೆ. ಆದ್ದರಿಂದ ಈ ವಿಷಯವು ಮರುಪರಿಶೀಲನೆಗೆ ಅರ್ಹವಾಗಿದೆ ಎಂದು ವಾದಿಸಿದರು.

ಜನತಾ ಪ್ರಾತಿನಿಧ್ಯ ಕಾಯ್ದೆಯು ಭಾರತದ ನಾಗರಿಕರಿಗೆ ಮಾತ್ರ ಮತದಾರರಾಗಿ ದಾಖಲಾಗಲು ಅವಕಾಶ ನೀಡುತ್ತದೆ ಎಂದು ನಾರಂಗ್ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶ ಗೋಗ್ನೆ ಸೋನಿಯಾ ಗಾಂಧಿ ಸೇರಿದಂತೆ ಇಬ್ಬರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದರು. ಸರ್ಕಾರದ ಪರವಾಗಿ ಪ್ರಾಸಿಕ್ಯೂಟರ್‌ಗೆ ನೋಟಿಸ್‌ ನೀಡಲಾಗಿದೆ. ಈ ಅರ್ಜಿಯ ವಿಚಾರಣೆಯು ಜನವರಿ 6ರಂದು ನಡೆಯಲಿದೆ.

ಈ ಹಿಂದೆ ವಕೀಲ ವಿಕಾಸ್ ತ್ರಿಪಾಠಿ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಪರಿಷ್ಕರಣಾ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ವಜಾಗೊಳಿಸಿದ್ದರು. ಇದಕ್ಕೆ ಕಾನೂನು ಅಡಿಪಾಯವಿಲ್ಲ ಮತ್ತು 1980ರ ಚುನಾವಣಾ ದಾಖಲೆಗಳ ಪ್ರಮಾಣೀಕರಿಸದ ನಕಲು ಪ್ರತಿಗಳು ಮಾತ್ರ ಇದೆ ಎಂದು ಹೇಳಿದ್ದರು. ಪೌರತ್ವ ಮತ್ತು ಮತದಾರರ ಪಟ್ಟಿಯ ಪ್ರಶ್ನೆಗಳು ಕೇಂದ್ರ ಸರ್ಕಾರ ಮತ್ತು ಭಾರತದ ಚುನಾವಣಾ ಆಯೋಗದ ವ್ಯಾಪ್ತಿಗೆ ಮಾತ್ರ ಬರುತ್ತವೆ. ಕ್ರಿಮಿನಲ್ ದೂರಿನ ಮೂಲಕ ನಿರ್ಣಯಿಸಲು ಸಾಧ್ಯವಿಲ್ಲ ಎಂದು ಮ್ಯಾಜಿಸ್ಟ್ರೇಟ್ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...