ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕೇಜ್ರಿವಾಲ್ ವಿರುದ್ಧ ಪರ್ವೇಶ್ ವರ್ಮಾ ಕಣಕ್ಕೆ

Date:

ದೆಹಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಲೋಕಸಭೆಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರನ್ನು ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ.

ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಲ್ಕಾಜಿ ಕ್ಷೇತ್ರದಲ್ಲಿ ಎಎಪಿಯಿಂದ ಸ್ಪರ್ಧಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಆತಿಶಿ ವಿರುದ್ಧ ಬಿಜೆಪಿ ಹಿರಿಯ ನಾಯಕ ರಮೇಶ್ ಬಿಧುರಿ ಸ್ಪರ್ಧಿಸಲಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಎಎಪಿಯ ಅಂತಿಮ ಅಭ್ಯರ್ಥಿ ಪಟ್ಟಿ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಎಎಪಿ ಮಾಜಿ ಸಚಿವರಾದ ರಾಜ್ ಕುಮಾರ್ ಆನಂದ್ ಮತ್ತು ಕೈಲಾಶ್ ಗಹ್ಲೋಟ್ ಕೂಡಾ ಬಿಜೆಪಿ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಕಳೆದ ವರ್ಷ ಎಎಪಿಯಿಂದ ಬಿಜೆಪಿಗೆ ಪಲಾಯನಗೊಂಡ ಇಬ್ಬರೂ ಕೂಡಾ ಈ ಬಾರಿ ದೆಹಲಿ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳಾಗಿದ್ದಾರೆ.

ಇನ್ನು ಮತದಾರರಿಗೆ ಹಣ ಹಂಚುತ್ತಿರುವ ಆರೋಪ ಎದುರಿಸಿರುವ ಪರ್ವೇಶ್ ವರ್ಮಾ ಅವರು ಕೇಜ್ರಿವಾಲ್ ಎದುರು ಸ್ಪರ್ಧೆಗಿಳಿದಿದ್ದಾರೆ. ಇವರಿಬ್ಬರ ಜೊತೆ ಕಾಂಗ್ರೆಸ್‌ನಿಂದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರು ಕಣಕ್ಕಿಳಿದಿದ್ದಾರೆ.

ಕೇಜ್ರಿವಾಲ್ 2013ರಿಂದ ನವದೆಹಲಿ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಕ್ಷೇತ್ರವನ್ನು ತನ್ನ ಹಿಡಿತಕ್ಕೆ ಪಡೆಯಲು ಈಗ ವರ್ಮಾ ಮುಂದಾಗಿದ್ದಾರೆ. ಈ ನಡುವೆ ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ ವರ್ಮಾ ಮಹಿಳೆಯರಿಗೆ 1,100 ರೂಪಾಯಿಗಳನ್ನು ಹಂಚಿದ್ದಾರೆ ಎಂಬ ಆರೋಪವೂ ಇದೆ. ವರ್ಮಾ ವಿರುದ್ಧ ಎಎಪಿ ಇಡಿಗೆ ದೂರು ಸಲ್ಲಿಸಿದೆ. ಆದರೆ ವರ್ಮಾ ಈ ಆರೋಪವನ್ನು ಅಲ್ಲಗಳೆದಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ| ಚುನಾವಣೆ ಹೊಸ್ತಿಲಲ್ಲೇ ಐವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

ಇನ್ನು ಬಿಜೆಪಿ ತನ್ನ ಗಾಂಧಿ ನಗರ ಶಾಸಕ ಅನಿಲ್ ಬಾಜ್‌ಪೇಯ್ ಅವರನ್ನು ಕೈಬಿಟ್ಟು ದೆಹಲಿಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ 2003ರಿಂದ 2013ರವರೆಗೆ ಸಚಿವರಾಗಿದ್ದ ಲವ್ಲಿ ಕಳೆದ ವರ್ಷ ಬಿಜೆಪಿ ಸೇರಿದ್ದರು.

ಇನ್ನು ಎಎಪಿ ಮಾಜಿ ಸಚಿವ ಕೈಲಾಶ್ ಗಹ್ಲೋಟ್ ಟರ್ಫ್ ನಜಾಫ್‌ಗಢ್ ಬದಲಿಗೆ ಬಿಜ್ವಾಸನ್‌ನಿಂದ ಕಣಕ್ಕಿಳಿದಿದ್ದಾರೆ. ರಾಜ್ ಕುಮಾರ್ ಆನಂದ್ ಅವರು ಪಟೇಲ್ ನಗರದ ಅಭ್ಯರ್ಥಿಯಾಗಿದ್ದಾರೆ.

ಎಎಪಿ ಈಗಾಗಲೇ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಇದುವರೆಗೆ 47 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...