ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಸೆ.2ರವರೆಗೆ ವಿಸ್ತರಣೆ

Date:

ಆರೋಪಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿ ಕೋರ್ಟ್‌ ಆದೇಶಿಸಿದೆ.

ಈ ಹಿಂದಿ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಾದವನ್ನು ಆಲಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆರೋಪಿಗಳ ಬಂಧನವನ್ನು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಲೋಕಸಭಾ ಚುನಾವಣೆಯ ಸಮಯದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ, ಜೂನ್ 2ರಂದು ಅವರನ್ನು ಮತ್ತೆ ಬಂಧಿಸಲಾಗಿದೆ. ಅಂದಿನಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...