ದೆಹಲಿ ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಜಾಮೀನು ಅರ್ಜಿ; ಸಿಬಿಐ, ಇಡಿಗೆ ಹೈಕೋರ್ಟ್ ನೋಟಿಸ್

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ಎಪಿಪಿ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನವಿ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್‌, ಇಡಿ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಸಿಸೋಡಿಯಾ ಅವರ ಮನವಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಇಡಿ ಮತ್ತು ಸಿಬಿಐಗೆ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಸೂಚನೆ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಿದ್ದಾರೆ.

ಸಿಸೋಡಿಯಾ ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ವಾರಕ್ಕೊಮ್ಮೆ ನಿವಾಸದಲ್ಲಿ ಭೇಟಿ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾರಕ್ಕೊಮ್ಮೆ ಪತ್ನಿಯನ್ನು ಭೇಟಿಯಾಗಲು ಕಸ್ಟಡಿ ಪೆರೋಲ್‌ಗಾಗಿ ಸಿಸೋಡಿಯಾ ಸಲ್ಲಿಸಿರುವ ಮನವಿಗೆ ಯಾವುದೇ ಅಭ್ಯಂತರವಿಲ್ಲ” ಎಂದು ಇಡಿ ಹೇಳಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಜಾಮೀನು ಅರ್ಜಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ವಜಾಗೊಳಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಸೋಡಿಯಾ ಮಂಗಳವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಿಸೋಡಿಯಾ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು 2023ರ ಫೆಬ್ರವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಲಾಗಿದ್ದು, ಒಂದು ವರ್ಷದಿಂದ ಅವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪ್ರಕರಣದಲ್ಲಿ ಅವರು ನಿರಪರಾಧಿ, ದೆಹಲಿ ಮದ್ಯ ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ವಾದವನ್ನು ಆಲಿಸಿದ ನ್ಯಾಯಲಯ ಪ್ರತಿಕ್ರಿಯೆ ಕೇಳಿ ಸಿಬಿಐ ಮತ್ತು ಇಡಿಗೆ ನೋಟಿಸ್‌ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...