ದೆಹಲಿ ಫಲಿತಾಂಶ | ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಸೋಲು

Date:

ದೇಶದ ಗಮನ ಸೆಳೆದಿರುವ ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.

ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲೇ ಇದ್ದರು. ಬಿಜೆಪಿಯ ಪರ್ವೇಶ್ ವರ್ಮಾ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ. ದಿಲ್ಲಿ ಸಿಎಂ ಆತಿಶಿ, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಸೇರಿ ಎಎಪಿ ಪಕ್ಷದ ಪ್ರಭಾವಿ ನಾಯಕರು ಹಿನ್ನಡೆಯಲ್ಲಿದ್ದಾರೆ.

ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 24 ಕ್ಷೇತ್ರಗಳಲ್ಲಿ ಮುಂದಿದೆ. ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಆಪ್‌ಗೆ ನಿರಾಶೆಯಾಗಿದೆ. ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನಿಜವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...