ದೆಹಲಿ ಫಲಿತಾಂಶ | ಎಎಪಿಯ ಘಟಾನುಘಟಿಗಳಿಗೆ ಸೋಲು; ಆತಿಶಿಗೆ ಗೆಲುವು

Date:

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ ಸೋಲು ಕಂಡಿದೆ. ಚುನಾವಣೆಯಲ್ಲಿ ಎಎಪಿಯನ್ನು ಮುನ್ನಡೆಸುತ್ತಿದ್ದ ಘಟಾನುಘಟಿ ನಾಯಕರೇ ಸೋಲುಂಡಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ದೆಹಲಿ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಸೇರಿದಂತೆ ಹಲವಾರು ಪ್ರಮುಖ ನಾಯಕರು ಸೋಲುಂಡಿದ್ದಾರೆ. ದೆಹಲಿ ಅಧಿಕಾರದಿಂದ ಹೊರಗುಳಿಯುವುದು ಮಾತ್ರವಲ್ಲದೆ, ಜನಪ್ರತಿನಿಧಿಗಳ ಸ್ಥಾನವನ್ನೂ ಕಳೆದುಕೊಂಡಿದ್ದಾರೆ.

ಭ್ರಷ್ಟಾಚಾರ ಆರೋಪ, ಬಂಧನ, ಜೈಲುವಾಸ ಅನುಭವಿಸಿದ್ದ ಅರವಿಂದ ಕೇಜ್ರಿವಾಲ್, ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ, ಮತ್ತೆ ಜನಾಭಿಪ್ರಾಯ ಪಡೆದ ಮುಖ್ಯಮಂತ್ರಿ ಆಗುತ್ತೇನೆಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಕೇಜ್ರಿವಾಲ್‌ ಅವರು ಬಿಜೆಪಿಯ ಪರ್ವೇಶ್‌ ವರ್ಮಾ ವಿರುದ್ಧ ಸೋಲುಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ 2 ವರ್ಷ ಜೈಲುವಾಸ ಅನುಭವಿಸಿ, ಹೊರಬಂದಿದ್ದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಅವರು ಜಂಗ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಅವರು ಬಿಜೆಪಿಯ ತರವಿಂದರ್ ಸಿಂಗ್ ವರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಎಎಪಿ ಕೋರ್‌ ಕಮಿಟಿಯ ಸದಸ್ಯರಾದ ಸತ್ಯೇಂದ್ರ ಜೈನ್ ಅವರೂ ಕೂಡ ಸೋಲುಂಡಿದ್ದಾರೆ.

ಇನ್ನು, ಕೇಜ್ರಿವಾಲ್‌ ರಾಜೀನಾಮೆಯ ಬಳಿಕ ದೆಹಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದ, ಕೇಜ್ರಿವಾಲ್ ಜೈಲಿನಲ್ಲಿದ್ದಾಗ ಎಎಪಿಯನ್ನು ಮುನ್ನಡೆಸಿದ್ದ ಆತಿಶಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮತ್ತೆ, ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರು ಈಗಾಗಲೇ ಸೋತಿರುವುದರಿಂದ ಆತಿಶಿಯವರು ದೆಹಲಿಯ ಮುಂದಿನ ವಿಪಕ್ಷ ನಾಯಕಿಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...