ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ, ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ

Date:

ಮುಡಾ ಪ್ರಕರಣ ಸಂಬಂಧವಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗುರುವಾರ ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

“ಸಿದ್ದರಾಮಯ್ಯ ಕೊಡಲೇ ರಾಜೀನಾಮೆ ಕೊಡಬೇಕು, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಧಿಕ್ಕಾರ, ಮುಡಾ ಸೈಟ್‍ಗಳನ್ನು ಕೊಳ್ಳೆ ಹೊಡೆದ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಬೆಲೆ ಏರಿಕೆ, ತೆರಿಗೆ ಏರಿಕೆ ಸಿದ್ದರಾಮಯ್ಯನವರಿಗೆ ಧಿಕ್ಕಾರ..” ಎಂದು ಮೊದಲಾದ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಪ್ರಮುಖರು ಮಾತನಾಡಿ, ಮುಡಾ ಹಗರಣಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರಕಾರ ಇದು ಎಂದು ಟೀಕಿಸಿದರು.

“ವಿಧಾನಸಭೆ ವಿಸರ್ಜನೆ ಮಾಡಿ ತಮ್ಮ ಹಿಂದೆ ರಾಜ್ಯದ ಜನರಿದ್ದಾರೆ ಎಂದು ತೋರಿಸಿಕೊಟ್ಟರೆ ಬಿಜೆಪಿ ನಿಮ್ಮ ವಿರುದ್ಧ ಪ್ರತಿಭಟನೆಯನ್ನೇ ಮಾಡುವುದಿಲ್ಲ” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದರು.

“ಸಿದ್ದರಾಮ್ಯನವರೇ ನೀವು ವಿಧಾನಸಭೆ ವಿಸರ್ಜನೆಗೆ ಮುಂದಾದರೆ ಕಾಂಗ್ರೆಸ್ಸಿನ 136 ಶಾಸಕರ ಪೈಕಿ 135 ಜನ ಶಾಸಕರೂ ನಿಮ್ಮ ಜೊತೆ ಇರುವುದಿಲ್ಲ. ಜಮೀರ್, ಮಹದೇವಪ್ಪ, ಕಾಕಾ ಪಾಟೀಲ್ ಕೂಡ ಇರುವುದಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕನಸಿನ ಮಾತಾಗಿದೆ. ಲೂಟಿ, ಭ್ರಷ್ಟಾಚಾರ ಮಿತಿ ಮೀರಿದೆ. ಈ ಸರಕಾರಕ್ಕೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಮಾಡಲು ಅಧಿಕಾರ, ಯೋಗ್ಯತೆ ಇಲ್ಲ ಎಂದ ಅವರು, ರಾಜೀನಾಮೆ ಕೊಡುವುದೊಂದೇ ನಿಮ್ಮ ಮುಂದಿನ ದಾರಿ” ಎಂದರು.

“ಅರ್ಕಾವತಿ ಹಗರಣ ತಾವು ಬಿಳಿಬಟ್ಟೆಯಂತಿಲ್ಲ ಎಂಬುದನ್ನು ತೋರಿಸುತ್ತದೆ. ಸಿದ್ದರಾಮಯ್ಯನವರು ರೀಡೂ ಹೆಸರಿನಲ್ಲಿ 880 ಎಕರೆಯನ್ನು ರಿಯಲ್ ಎಸ್ಟೇಟ್ ಬ್ರೋಕರ್‌ಗಳಿಗೆ ಡೀನೋಟಿಫಿಕೇಶನ್ ಮಾಡಿದ್ದಾರೆ” ಎಂದು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಆರೋಪಿಸಿದರು.

ಪೊಲೀಸ್ ವಶಕ್ಕೆ

ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ಜನಪ್ರತಿನಿಧಿಗಳನ್ನು ಪೊಲೀಸರು ಬಂಧಿಸಿ, ಕರೆದೊಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...