ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

Date:

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. ಜೆಡಿಯು ಬೇಡಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ಮೋದಿ ಸರ್ಕಾರ, ಬಿಹಾರಕ್ಕೆ ಆ ಸ್ಥಾನವನ್ನು ನೀಡುವುದೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚರ್ಚೆ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಎಂಎಸ್‌ಎಂಇ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ) ಸಚಿವ ಜಿತನ್ ರಾಮ್ ಮಾಂಝಿ, ‘ನೀತಿ ಆಯೋಗವು ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಂಬಂಧನೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಆದರೆ, ರಾಜ್ಯದ ಹಣಕಾಸಿನ ಅಗತ್ಯಗಳನ್ನು ಪೂರೈಸಬಹುದು’ ಎಂದು ಹೇಳಿದ್ದಾರೆ.

ಹಾಜಿಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಂಝಿ, “ನೀತಿ ಆಯೋಗವು ದೇಶದ ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದನ್ನು ಸ್ಪಷ್ಟವಾಗಿ ನಿರಾಕರಿಸಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ಏನು ಬೇಕಾದರೂ ಕೇಳಬಹುದು. ಆದರೆ, ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಬಿಹಾರಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದೆ. ಅಭಿವೃದ್ಧಿಗೆ ಎಷ್ಟೇ ಹಣ ಬೇಕಾದರೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ನೀಡಲಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದಾಗಿನಿಂದ, ಜೆಡಿಯು ನಾಯಕರು ಬಿಹಾರಕ್ಕೆ ವಿಶೇಷ ಸ್ಥಾನಮಾನಕ ನೀಡಬೇಕೆಂದು ಪ್ರತಿಪಾದಿಸುತ್ತಿದ್ದಾರೆ. ಜೆಡಿಯು ಬೇಡಿಕೆಗೆ ಕೇಂದ್ರ ಜಲಸಂಪನ್ಮೂಲ ಸಚಿವ ವಿಜಯ್ ಕುಮಾರ್ ಚೌಧರಿ ಮತ್ತು ಕಟ್ಟಡ ನಿರ್ಮಾಣ ಸಚಿವ ಅಶೋಕ್ ಚೌಧರಿ ಧ್ವನಿಗೂಡಿಸಿದ್ದಾರೆ.

ಏತನ್ಮಧ್ಯೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಮೀರಾ ಕುಮಾರ್ ಅವರಂತಹ ವಿರೋಧ ಪಕ್ಷದ ನಾಯಕರು ಎನ್‌ಡಿಎ ಸರ್ಕಾರದ ಭಾಗವಾಗಿದ್ದರೂ ಬಿಹಾರಕ್ಕೆ ಬಿಜೆಪಿಯಿಂದ ವಿಶೇಷ ಸ್ಥಾನಮಾನ ಪಡೆಯಲಾಗದ ಜೆಡಿಯುಅನ್ನು ಲೇವಡಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...