ಮಸೀದಿಗಳನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ಒಡೆಯುತ್ತೇವೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Date:

“ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ‌ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಅಂತಹ ಮಸೀದಿಗಳನ್ನು ಒಡೆದು ಪುಡಿ ಪುಡಿ ಮಾಡುತ್ತದೆ” ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶ್ರೀರಾಮಸೇನೆಯಿಂದ ಆಯೋಜನೆ ಮಾಡಿದ್ದ ‘ಮೋದಿ ಗೆಲ್ಲಿಸಿ.. ಭಾರತ ಉಳಿಸಿ’ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು ನಾಲಗೆ ಹರಿಬಿಟ್ಟಿದ್ದಾರೆ.

“ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಸ್ಥಾನಗಳ ಸರ್ವೆ ಕಾರ್ಯ ನಡೆಯುತ್ತಿದೆ. ಶೀಘ್ರ ಕಾಶಿಯಲ್ಲಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇಗುಲ ನಿರ್ಮಾಣವಾಗಲಿದೆ. ಶ್ರೀರಾಮನ ಬಗ್ಗೆ ಚರ್ಚಿಸುತ್ತಿರುವುದಕ್ಕೆ ಕೆಲವರ ಹೊಟ್ಟೆಯಲ್ಲಿ ಕಸಿವಿಸಿ ಆಗುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಶ್ರೀರಾಮನ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮನ್ನ ವಿರೋಧ ಮಾಡುತ್ತಾ ಬಂದವರ ಹೊಟ್ಟೆಯಲ್ಲಿ ಈಗ ಕಸಿವಿಸಿ ಆಗುತ್ತಿದೆ. ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ‌. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ‘ಇಂಡಿಯಾ’ ತೊರೆದು ಬಿಜೆಪಿ ಮೈತ್ರಿಗೆ ಮರಳುತ್ತಾರಾ ಬಿಹಾರ ಸಿಎಂ; ವದಂತಿಗಳೇನು?

“ಮೋದಿ ಭಾರತೀಯ ಸಂಸ್ಕೃತಿಯನ್ನ ವಿಶ್ವಕ್ಕೆ ಸಾರಿದರು. ದೇಶವನ್ನ ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಕಾಂಗ್ರೆಸ್ ಅವರ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು. ಜನವರಿ 22ರಂದು ರಾಮಮಂದಿರ ಉದ್ಘಾಟನೆ ದಿನದಂದು ಸ್ವತಂತ್ರ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ” ಎಂದಿದ್ದಾರೆ.

“ಸಿದ್ದರಾಮಯ್ಯ ಅವರು ಒಂದು ಸಾವಿರ ಕೋಟಿ ಹಣವನ್ನು ಮುಸ್ಲಿಮರಿಗೆ ಕೊಡುತ್ತೇನೆ ಅಂತ ಹೇಳಿದ್ದಾರೆ. ದುಡ್ಡನ್ನು ಇವರ ಅಪ್ಪನ‌ ಮನೆಯಿಂದ ತಂದು ಕೊಡುತ್ತಾರಾ? ‘ಹಮ್ ದೋ ಹಮಾರೆ ದೋ’ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲಿಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುವುದು ಮೋದಿಯವರ ಕಾಲಾವಧಿಯಲ್ಲಿ ಸಾಧ್ಯವಿಲ್ಲ” ಎಂದು ಮುಸ್ಲಿಮರನ್ನು ಹೀಯಾಳಿಸಿದ್ದಾರೆ.

“ಪ್ರಧಾನಿ ಮೋದಿ ಸೂರ್ಯ ಇದ್ದ ಹಾಗೆ. ನಾಯಿಗಳು ಬೊಗಳುತ್ತಿರುತ್ತವೆ. ಪ್ರಿಯಾಂಕ್ ಖರ್ಗೆ ಎಂಬ ರಾಜಕಾರಣಿ ಮೋದಿ ಬಗ್ಗೆ ಟೀಕೆ ಮಾಡುತ್ತಾರೆ. ಪ್ರಿಯಾಂಕ್ ಖರ್ಗೆ ಚಿಲ್ಲರೆ ರಾಜಕಾರಣಿ” ಎಂದು ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಈಶ್ವರಪ್ಪ ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...