ಡಿನೋಟಿಫಿಕೇಷನ್ ಆಗಿದ್ದು ಯಡಿಯೂರಪ್ಪ ಕಾಲದಲ್ಲಿ, ಎಚ್‌ಡಿಕೆ ತಪ್ಪಿಲ್ಲ: ನಿಖಿಲ್ ಕುಮಾರಸ್ವಾಮಿ

Date:

ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಡಿನೋಟಿಫಿಕೇಷನ್ ವಿಚಾರವಾಗಿ ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಮಂತ್ರಿ ಆದ ಮೇಲೆ ಕಾಂಗ್ರೆಸ್ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಕುಮಾರಸ್ವಾಮಿ ಅವರ ಬಗ್ಗೆ ಭಯ ಇದೆ” ಎಂದು ವಾಗ್ದಾಳಿ ನಡೆಸಿದರು.

“ಕುಮಾರಸ್ವಾಮಿ ಅವರು ವಾಸ್ತವ ಮಾತಾಡ್ತಾರೆ. ಎಲ್ಲವನ್ನು ಜನರ ಮುಂದೆ ತೆರೆದಿಡುತ್ತಾರೆ.ಇದರಿಂದ ಪಾಪ ಅವರಿಗೆ ಭಯ ಶುರುವಾಗಿದೆ‌. ಹೀಗಾಗಿ ಕುಮಾರಸ್ವಾಮಿ ಅವರ ಮೇಲೆ ನಿತ್ಯ ದಾಖಲಾತಿ ಹುಡುಕುತ್ತಿದ್ದಾರೆ. ದಾಖಲಾತಿ ರೆಡಿ ಮಾಡಿ ಅಂತ ಸಿಎಂ, ಡಿಸಿಎಂ, ಸಚಿವ ಸಂಪುಟ ಕುಮಾರಸ್ವಾಮಿ ತೇಜೋವಧೆ ಮಾಡಬೇಕು ಪ್ರಯತ್ನ ಮಾಡ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಡಾ ಕೇಸ್, ಗಂಗೇನಹಳ್ಳಿ ಕೇಸ್‌ಗೂ ಸಂಬಂಧ ಇಲ್ಲ

“ಕುಮಾರಸ್ವಾಮಿ ಅವರನ್ನ ತಪ್ಪಿತಸ್ಥರಾಗಿ ಮಾಡಬೇಕು ಅಂತ ಕಾಂಗ್ರೆಸ್ ಸರ್ಕಾರ ಹೊರಟಿದೆ. ಡಿನೋಟಿಫಿಕೇಷನ್ ವಿಚಾರವಾಗಿ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. 2015 ರಲ್ಲಿ ಈ ಪ್ರಕರಣ ಆಗಿದೆ. ಇದಕ್ಕೂ ಕುಮಾರಸ್ವಾಮಿ ಅವರಿಗೂ ಸಂಬಂಧವಿಲ್ಲ,ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇ‌ಸ್‌ಗೂ ಸಂಬಂಧವೇ ಇಲ್ಲ. ಸುಮ್ಮನೆ ಅವರ ತಪ್ಪು ಮುಚ್ಚಿಕೊಳ್ಳಲು ತಿರುಚೋ ಕೆಲಸ ಆಗ್ತಿದೆ” ಎಂದರು.

“ಡಿನೋಟಿಫಿಕೇಷನ್ ಆಗಿರೋದು ಯಡಿಯೂರಪ್ಪ ಅವರ ಕಾಲದಲ್ಲಿ. ಇದಕ್ಕೂ ಕುಮಾರಸ್ವಾಮಿ ಅವರಿಗೆ ಏನ್ ಸಂಬಂಧ? ಕುಮಾರಸ್ವಾಮಿ ಅವರ ಕಾಲದಲ್ಲಿ ಫೈಲ್ ರಿಜೆಕ್ಟ್ ಮಾಡಿದ್ರು. ಅವರು ಸಹಿ ಹಾಕಿದ್ರಾ? ಅವರು ಡಿನೋಟಿಫಿಕೇಶನ್ ಮಾಡಿದ್ರಾ” ಎಂದು ಪ್ರಶ್ನಿಸಿದರು.

ಶಾಸಕ ಮುನಿರತ್ನ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, “ಮುನಿರತ್ನ ಕೇಸ್ ತನಿಖೆ ಆಗ್ತಿದೆ. ತನಿಖೆ ನಡೆಯೋ ಸಮಯದಲ್ಲಿ ಮಾತಾಡೋದು ಸರಿಯಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿ” ಎಂದರು.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ

ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರು ಎಂಬ ವಿಚಾರಕ್ಕೆ ಮಾತನಾಡಿ, “ಟಿಕೆಟ್ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಮಾತಾಡಿದ್ದಾರೆ‌. ಇನ್ನು ಚುನಾವಣೆ ಘೋಷಣೆ ಆಗಿಲ್ಲ. ಉಪ ಚುನಾವಣೆ ದಿನಾಂಕ ಘೋಷಣೆ ಆಗಲಿ. ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ” ಎಂದು ತಿಳಿಸಿದರು.

ಅತಿ ಶೀಘ್ರದಲ್ಲೇ ಗುಡ್ ನ್ಯೂಸ್

ಚನ್ನಪಟ್ಟಣದಲ್ಲಿ ಜೆಡಿಎಸ್ ನಗರಸಭೆ ಸದಸ್ಯರು ಕಾಂಗ್ರೆಸ್‌ ಸೇರ್ಪಡೆ ಆಗಿರೋ ವಿಚಾರಕ್ಕೆ ಮಾತನಾಡಿದ ಅವರು, “ಶುಕ್ರವಾರ ನಾನು ನಗರಪಾಲಿಕೆ ಸದಸ್ಯರ ಜೊತೆ ಮಾತುಕತೆ ಮಾಡಿದ್ದೇನೆ. ಸಾಕಷ್ಟು ಜನ ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಲೋಕಸಭೆ ‌ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಆಮಿಷ ಒಡ್ಡಿ ಅವರನ್ನ‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇವೆಲ್ಲವನ್ನು ಸರಿ ಮಾಡೋಕೆ‌ ನಿನ್ನೆ ತೋಟದ ಮನೆಯಲ್ಲಿ ಸಭೆ ಮಾಡಿದ್ದೇನೆ. ಅತಿ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡ್ತೀನಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...