ಜೈಲಿನಲ್ಲಿ ಇನ್ಸುಲಿನ್ ನಿರಾಕರಣೆ; ಬಿಜೆಪಿ ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಾ: ಸಂಜಯ್ ಸಿಂಗ್

Date:

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುತ್ತಿದೆ” ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು, “ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಯಸುತ್ತಿದೆಯೇ” ಎಂದು ಪ್ರಶ್ನಿಸಿದರು.

“ಬಿಜೆಪಿಯು ಅರವಿಂದ್ ಕೇಜ್ರಿವಾಲ್‌ ಅವರಿಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುವ ಮೂಲಕ ಅವರಿಗೆ ಹಾನಿ ಮಾಡುವ ಕೆಟ್ಟ ಯೋಜನೆಯನ್ನು ರೂಪಿಸುತ್ತಿದೆ. ಕೇಜ್ರಿವಾಲ್ ಕಳೆದ 20 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಈಗ ಇನ್ಸುಲಿನ್ ಇಲ್ಲದಿರುವುದು ಸಿಎಂ ಜೀವಕ್ಕೆ ಗಂಭೀರ ಅಪಾಯವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದಾಗ, ಜೈಲಿನಲ್ಲಿ ಕೇಜ್ರಿವಾಲ್‌ ಅವರಿಗೆ ಗ್ಲೂಕೋಸ್, ಬಾಳೆಹಣ್ಣು, ಟೋಫಿ ಮತ್ತು ಇತರ ಆಹಾರ ಪದಾರ್ಥಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ನಿರ್ದಿಷ್ಟಪಡಿಸಿದೆ” ಎಂದು ಈ ಸಂದರ್ಭದಲ್ಲಿ ಸಂಜಯ್ ಸಿಂಗ್ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

“ಮುಖ್ಯವಾಹಿನಿಯ ಮಾಧ್ಯಮಗಳು ಈ ಸುಪ್ರೀಂ ಕೋರ್ಟ್ ಆದೇಶವನ್ನು ಒಮ್ಮೆಯೂ ಪ್ರಕಟಿಸದಿರುವುದು ನನಗೆ ಆಶ್ಚರ್ಯವಾಗಿದೆ. ದೇಶದ ಜನರು ಸಂಪೂರ್ಣ ಸತ್ಯವನ್ನು ತಿಳಿದುಕೊಳ್ಳಬೇಕು ಇದರಿಂದ ಬಿಜೆಪಿ ಮತ್ತು ಅದರ ಅಂಗಸಂಸ್ಥೆಯಾದ ಇಡಿಯ ಸುಳ್ಳುಗಳನ್ನು ಬಹಿರಂಗಪಡಿಸಬೇಕು” ಎಂದು ಎಎಪಿ ನಾಯಕ ಹೇಳಿದರು.

“ಕೇಜ್ರಿವಾಲ್ 20 ವರ್ಷಗಳಿಂದ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಕಳೆದ 30 ವರ್ಷಗಳಿಂದ ಮಧುಮೇಹಿಯಾಗಿದ್ದಾರೆ. ಇಷ್ಟೆಲ್ಲಾ ಆದ ಮೇಲೆ ಈ ಸತ್ಯವನ್ನು ದೇಶದ ಜನತೆಯ ಮುಂದೆ ಏಕೆ ಮುಚ್ಚಿಡಲಾಗುತ್ತಿದೆ? ಕೇಜ್ರಿವಾಲ್ ವಿರುದ್ಧ ಬಿಜೆಪಿ ಮತ್ತು ಪ್ರಧಾನಿ ಮೋದಿ ಆಳವಾದ ಪಿತೂರಿ ನಡೆಸುತ್ತಿದ್ದಾರೆ. ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದ್ದಾರೆ” ಎಂದು ಈ ಹಿಂದೆಯೂ ಎಎಪಿ ಹೇಳಿಕೆ ನೀಡಿದೆ.

ಇದನ್ನು ಓದಿದ್ದೀರಾ?  ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

“ಮಧುಮೇಹವು ಮಾರಣಾಂತಿಕ ಕಾಯಿಲೆಯಾಗಿದೆ. ಇದು ಜೀವಕ್ಕೆ ಅಪಾಯಕಾರಿಯಾಗಿದ್ದು ಯಾರನ್ನೂ ಬೇಕಾದರೂ ಕೊಲ್ಲಬಹುದು. ಮಧುಮೇಹ ಹೊಂದಿರುವವರಿಗೆ ಇನ್ಸುಲಿನ್ ನೀಡದಿರುವುದು ಅಪರಾಧ. ಮಧುಮೇಹ ರೋಗಿಯು ಸಮಯಕ್ಕೆ ಸರಿಯಾಗಿ ಇನ್ಸುಲಿನ್ ಪಡೆಯಲು ಸಾಧ್ಯವಾಗದಿದ್ದರೆ ತಕ್ಷಣವೇ ಗ್ಲೂಕೋಸ್ ಅನ್ನು ನೀಡಬೇಕೆಂದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ” ಎಂದು ವಿವರಿಸಿದರು.

ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಂಧನವಾಗುವ ಒಂದು ತಿಂಗಳ ಹಿಂದೆ ಇನ್ಸುಲಿನ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದು, ಮಧುಮೇಹದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಹಾರ್ ಜೈಲು ಆಡಳಿತವು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ನೀಡಿದ ವರದಿಯಲ್ಲಿ ತಿಳಿಸಿದೆ. ಈ ವರದಿಯು ಬಿಜೆಪಿಯ ಪಿತೂರಿ ಎಂದು ಎಎಪಿ ನಾಯಕಿ ಅತಿಶಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...