ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಸ್ಕೂಟರ್‌ ಡಿಕ್ಕಿ, ಗಂಭೀರ ಗಾಯ

Date:

ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಶುಕ್ರವಾರ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಸ್ಕೂಟರ್‌ ಒಂದು ಬಂದು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುವಾಗ ಈ ಅಪಘಾತ ನಡೆದಿದೆ. ಮಾರ್ಗಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿಯುವಾಗ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ರಸ್ತೆಗೆ ಬಿದ್ದಿದ್ದು, ಅವರ ತಲೆ, ಕೈಕಾಲುಗಳಿಗೆ ಗಾಯವಾಗಿದೆ.

ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ಅವರನ್ನು ಕಳುಹಿಸಲಾಗಿದ್ದು, ರುದ್ರಪ್ಪ ಲಮಾಣಿ ಅವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹಿರಿಯೂರು DYSP ಶಿವಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...