ಅವಹೇಳನ : ‘ಇನ್ನುಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದ ಬಿಜೆಪಿ ಕಾರ್ಯಕರ್ತೆಗೆ ಠಾಣಾ ಜಾಮೀನು!

Date:

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಹೈಗ್ರೌಂಡ್ಸ್‌ ಪೊಲೀಸ್ ಠಾಣಾಧಿಕಾರಿಯವರನ್ನು ಸಂಪರ್ಕಿಸಿದಾಗ, ‘ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಕುಟುಂಬದ ಬಗ್ಗೆ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಠಾಣಾ ಜಾಮೀನು ನೀಡಿ ಕಳುಹಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು. ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ತಪ್ಪೊಪ್ಪಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಶಕುಂತಲಾ ನಟರಾಜ್ ಟ್ವೀಟ್ ಮಾಡಿದ್ದಾರೆ ಅನ್ನುವ ಕಾರಣಕ್ಕೆ ಬೆಳಗ್ಗೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಸ್ವೇಷನ್ ಜಾಮೀನಿನ ಮೇಲೆ ಮನೆಗೆ ಕಳುಹಿಸಿದ್ದಾರೆ. ಉಡುಪಿ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಸ್ವಾತಂತ್ರ್ಯವೂ ಈ ಸರ್ಕಾರ ಬಂದ ಬಳಿಕ ಇಲ್ಲವೇ?’ ಎಂದು ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಈ ದಿನ.ಕಾಮ್ ಜೊತೆಗೆ ಮಾತನಾಡಿದಾಗ ಹೇಳಿದರು.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹನುಮಂತರಾಯ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಜು.27ರಂದು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.

‘ಸ್ಟೇಷನ್ ಜಾಮೀನು’ ಅಂದರೆ ಏನು?

ಯಾವುದಾದರೊಂದು ಘಟನೆಗೆ ಸಂಬಂಧಿಸಿ ವ್ಯಕ್ತಿಯ ಮೇಲೆ ದೂರು ದಾಖಲಾದಾಗ, ದೂರು ದಾಖಲಾದ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಾರೆ. ವಿಚಾರಣೆ ನಡೆಸಿದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡು ಪ್ರಕರಣ ತೀವ್ರ ಸ್ವರೂಪದ್ದಲ್ಲದಿದ್ದರೆ ಅಥವಾ ನ್ಯಾಯಾಲಯಕ್ಕೆ ಕಳುಹಿಸಬೇಕೆಂದು ಅನಿಸದಿದ್ದರೆ, ಮುಚ್ಚಳಿಕೆ ಬರೆಸಿಕೊಂಡು ಪೊಲೀಸರೇ ನೀಡುವ ಜಾಮೀನು ‘ಸ್ಟೇಷನ್ ಜಾಮೀನು’ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...