ದೇವನಹಳ್ಳಿ | ರೈತರಿಗೆ ನೀಡಿದ ನೋಟಿಸ್‌ ಹಿಂಪಡೆಯಲು ಅಧಿಕಾರಿಗಳಿಗೆ ಸಚಿವ ಕೆ ಎಚ್ ಮುನಿಯಪ್ಪ ಸೂಚನೆ

Date:

ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ ಗ್ರಾಮದ ರೈತರಿಗೆ ಭೂಮಿ ತೆರವು ಕುರಿತು ಅಧಿಕಾರಿಗಳು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನೋಟಿಸ್ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧೇನೆ ಎಂದು ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿಯ ರೈತರು ಗುರುವಾರ ಸಚಿವರ ನಿವಾಸಕ್ಕೆ ಬಂದು ಮನವಿ ಸಲ್ಲಿಸಿದ ವೇಳೆ ಮಾತನಾಡಿ,”ಚನ್ನರಾಯಪಟ್ಟಣ ಹೋಬಳಿಯ ರೈತರ ಜಮೀನನ್ನು ಕೆಐಡಿಬಿ ಸ್ವಾಧೀನ ಪಡಿಸಿಕೊಳ್ಳುತ್ತಿರುವ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರೊಂದಿಗೆ ಸಭೆಯನ್ನು ನಡೆಸಿದ್ದು ಕೆಲವೇ ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ರೈತರಿಗೆ ಭರವಸೆ ನೀಡಿದರು.

ಮುಂದಿನ ಸರ್ಕಾರದ ಆದೇಶದವರೆಗೂ ಯಾವುದೇ ನೋಟಿಸ್‌ಗಳನ್ನು ರೈತರಿಗೆ ನೀಡದಂತೆ ಹಾಗೂ ತಕ್ಷಣವೇ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವವರೆಗೂ ರೈತರಿಗೆ ನೋಟಿಸ್ ನೀಡಲ್ಲ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ರೈತರ ಧರಣಿ

ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿರುವ ರೈತರು 842 ದಿನ ಅಂದರೆ ಸುಮಾರು ಎರಡು ವರ್ಷಗಳಿಂದ ಅನ್ನ, ನೀರು ಲೆಕ್ಕಿಸದೆ ಧರಣಿ ಕುಳಿತಿದ್ದಾರೆ. ತರಹೇವಾರಿ ಹೋರಾಟಗಳನ್ನು ರೂಪಿಸುತ್ತಲೇ ಬಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ ಎಚ್‌ ಮುನಿಯಪ್ಪ ಅವರ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಮುನಿಯಪ್ಪ ಮನೆಯ ಮುಂದೆ ಧರಣಿ ಕುಳಿತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...