ಕೋಮುವಾದಿ ಕಿರೀಟ ಧರಿಸಿಕೊಂಡ ದೇವೇಗೌಡರು ಹತಾಶೆಯಲ್ಲಿದ್ದಾರೆ, ಅವರ ಮಾತು ನನಗೆ ಆಶೀರ್ವಾದ: ಸಿದ್ದರಾಮಯ್ಯ

Date:

ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

“ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ‘ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ’ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಗ ದೋಷದ ಫಲ” ಎಂದು ಕುಟುಕಿದ್ದಾರೆ.

“ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ” ಎಂದು ಹೇಳಿದ್ದಾರೆ.

“ಜಾತ್ಯತೀತ ಜನತಾ ಪಕ್ಷ ಎನ್ನುವುದು ‘ಬಿಜೆಪಿಯ ಬಿ ಟೀಮ್’ ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...