ಮಂಡ್ಯ ಜಿಲ್ಲಾ ನಾಯಕರ ಸಭೆ ನಡೆಸಿದ ಜೆಡಿಎಸ್ ವರಿಷ್ಠ ದೇವೇಗೌಡ; ಕುಮಾರಸ್ವಾಮಿ ಸ್ಪರ್ಧೆ ಖಚಿತ?

Date:

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಚ್‌ ಡಿ ಕುಮಾರಸ್ವಾಮಿ ಮತ್ತು ನನಗೆ (ದೇವೇಗೌಡ) ಹಾಗೂ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯವಿದೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಸ್ಪರ್ಧೆ ಖಚಿತ ಎಂಬುದನ್ನು ಪರೋಕ್ಷವಾಗಿ ಹೆಚ್‌ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಮಂಡ್ಯ ಜಿಲ್ಲಾ ಜೆಡಿಎಸ್​ ನಾಯಕರ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್​ ಪಾಲಾಗುವುದು ಬಹುತೇಕ ಖಚಿತ ಎಂಬರ್ಥದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಅಭ್ಯರ್ಥಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಅಲ್ಲದೇ ಯಾರು ಅಭ್ಯರ್ಥಿಯಾದರೆ ಹೇಗೆ ಎನ್ನುವ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಆಗಿದೆ. ಕುಮಾರಸ್ವಾಮಿ ಅವರು ಇವತ್ತು ಸಭೆಯಲ್ಲಿ ಇರಲಿಲ್ಲ. ಅಂತಿಮವಾಗಿ ಲೋಕಸಭೆ ಬಗ್ಗೆ ನಾವು ಒಂದು ಅಭಿಪ್ರಾಯ ತಗೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ನಾವು ಮೂವರಲ್ಲಿ(ದೇವೇಗೌಡ, ನಿಖಿಲ್, ಕುಮಾರಸ್ವಾಮಿ) ಒಬ್ಬರು ಮಂಡ್ಯದಿಂದ ಸ್ಪರ್ಧಿಸಿ ಎಂದು ಹೇಳುತ್ತಿದ್ದಾರೆ. ಅಭ್ಯರ್ಥಿ ಕುರಿತು ಅಭಿಪ್ರಾಯ ಸಂಗ್ರಹಿಸಿ, ನಮ್ಮ ಅಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಅಂತಿಮವಾಗಿ ನರೇಂದ್ರ ಮೋದಿ, ಜೆ ಪಿ ನಡ್ಡಾ, ಕುಮಾರಸ್ವಾಮಿ, ಬಿ ಎಸ್ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?

“ಮಂಡ್ಯ ಕ್ಷೇತ್ರದ ಎಂಟು ಕ್ಷೇತ್ರದಲ್ಲೂಓಡಾಟ ನಡೆಸುತ್ತೇವೆ. ಇಲ್ಲಿ ಜೆಡಿಎಸ್- ಬಿಜೆಪಿ ಪ್ರಶ್ನೆ ಅಲ್ಲ. ಎನ್​ಡಿಎದಲ್ಲಿ ನಾವು ಇದ್ದೇವೆ. ಅಂತಿಮವಾಗಿ ಮೋದಿ, ನಡ್ಡಾ, ಕುಮಾರಸ್ವಾಮಿ,ಯಡಿಯೂರಪ್ಪ ಎಲ್ಲರೂ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಾರೆ” ಎಂದು ಹೇಳಿದರು.

“ರೇವಣ್ಣ ಲೋಕಸಭೆಗೆ ಹೋಗುತ್ತೇನೆ ಎಂದು ಹೇಳಿಲ್ಲ. ಇದು ಮಾಧ್ಯಮದವರ ಸೃಷ್ಟಿ. ನಾವು ಮೂರು ಜನ ಒಗ್ಗಟ್ಟಾಗಿ ಹೋಗುತ್ತೇವೆ. ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಂತರ ನಾವು ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ” ಎಂದರು.

ಮಂಡ್ಯ ಲೋಕಸಭಾ ಸೀಟಿಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಸೀಟಿನ ಲಾಬಿಗಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಈ ಭೇಟಿಯ ಬೆನ್ನಲ್ಲೇ ಮಂಡ್ಯ ಜಿಲ್ಲಾ ನಾಯಕರ ಸಭೆ ನಡೆಸುವ ಮೂಲಕ ಜೆಡಿಎಸ್ ವರಿಷ್ಠ ದೇವೇಗೌಡ, ಠಕ್ಕರ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...