ನಮ್ಮ ‘ಧಕಡ್’ ಸರ್ಕಾರ 370ನೇ ವಿಧಿಯ ಗೋಡೆಯನ್ನು ಉರುಳಿಸಿತು: ಪ್ರಧಾನಿ ಮೋದಿ

Date:

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ಗೋಡೆಯನ್ನು ಉರುಳಿಸಿದ್ದು ನಮ್ಮ ‘ಧಕಡ್’ (ಬಲವಾದ) ಸರ್ಕಾರ. ಆ ಗೋಡೆ ಉರುಳಿದ ಪರಿಣಾಮ ಕಾಶ್ಮೀರವು ಈಗ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಆದರೆ, ಅದೇ ಕಾಶ್ಮೀರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ, ಚುನಾವಣಾ ಕಣದಿಂದ ಓಡಿಹೋಗಿದೆ. ಇದು, ಬಿಜೆಪಿಯ ಸೋಲಿನ ಭಯವನ್ನು ಸೂಚಿಸುತ್ತದೆ ಎಂಬುದು ಗಮನಾರ್ಹ.

ಹರಿಯಾಣದ ಅಂಬಾಲದಲ್ಲಿ ಶನಿವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಮೋದಿ, “ಮೋದಿಯವರ ಧಕದ್ (ಬಲವಾದ ಮತ್ತು ನಿರ್ಣಾಯಕ) ಸರ್ಕಾರವು ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಹಕ್ಕುಗಳನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯ ಗೋಡೆಯನ್ನು ಉರುಳಿಸಿತು. ಕಾಶ್ಮೀರದ ಅಭಿವೃದ್ಧಿಗೆ ಬಾಗಿಲು ತೆರೆಯಿತು” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ವಿರುದ್ಧವೂ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ ಮೋದಿ. “ಕಾಂಗ್ರೆಸ್‌ನ ಇತಿಹಾಸವು ಭಾರತದ ಪಡೆಗಳು ಮತ್ತು ಸೈನಿಕರಿಗೆ ದ್ರೋಹ ಬಗೆದಿದೆ. ‘ಜೀಪ್ ಹಗರಣ’ವು ಕಾಂಗ್ರೆಸ್‌ನ”ಮೊದಲ ಹಗರಣ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರ್ಬಲ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಬದಲಾಯಿಸಬಹುದೇ? ಹರಿಯಾಣವು ಸಶಸ್ತ್ರ ಪಡೆಗಳಿಗೆ ಸಾಕಷ್ಟು ಸಂಖ್ಯೆಯ ಸೈನಿಕರನ್ನು ನೀಡುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಹರಿಯಾಣದಲ್ಲಿ ತಾಯಂದಿರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದರು” ಎಂದಿದ್ದಾರೆ.

“ಹರಿಯಾಣದ ರಕ್ತನಾಳಗಳಲ್ಲಿ ದೇಶಭಕ್ತಿ ಹರಿಯುತ್ತದೆ. ರಾಜ್ಯವು ದೇಶವಿರೋಧಿ ಶಕ್ತಿಗಳನ್ನು ಅರ್ಥಮಾಡಿಕೊಂಡಿದೆ. ಆದ್ದರಿಂದ, ಹರಿಯಾಣದ ಪ್ರತಿ ಮನೆಯು ‘ಮೋದಿ ಸರ್ಕಾರ್ – ಫಿರ್ ಏಕ್ ಬಾರ್’ ಎಂದು ಹೇಳುತ್ತಿದೆ” ಎಂದರು.

“ದೇಶದಲ್ಲಿ ಧಕದ್ ಸರ್ಕಾರವಿದ್ದಾಗ, ಶತ್ರುಗಳು ಏನನ್ನೂ ಮಾಡುವ ಮೊದಲು 100 ಬಾರಿ ಯೋಚಿಸುತ್ತಾರೆ. ಈ ಹಿಂದೆ ತನ್ನ ಕೈಯಲ್ಲಿ ಬಾಂಬ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಕೈಯಲ್ಲಿ ಈಗ ‘ಭೀಖ್ ಕಾ ಕಟೋರಾ’ (ಭಿಕ್ಷಾಪಾತ್ರೆ) ಇದೆ” ಎಂದು ಮೋದಿ ಹೇಳಿದರು.

ಹರಿಯಾಣದ ಒಟ್ಟು 10 ಲೋಕಸಭಾ ಸ್ಥಾನಗಳಿಗೆ ಮೇ 25 ರಂದು ಮತದಾನ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...