ಧನಕರ್ ರಾಜೀನಾಮೆ ಬಳಿಕ ನಿತೀಶ್ ಕುಮಾರ್ ಬಗ್ಗೆ ಬಿಜೆಪಿಯಲ್ಲಿ ಪುನರ್ವಿಮರ್ಶೆ ನಡೆಯಬಹುದು: ತೇಜಸ್ವಿ ಯಾದವ್

Date:

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ಬಳಿಕ ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಒಕ್ಕೂಟದಲ್ಲಿ ಮುಂದುವರೆಸಬೇಕೇ ಎಂಬ ಬಗ್ಗೆ ಬಿಜೆಪಿ ಪುನರ್ವಿಮರ್ಶೆ ನಡೆಸುವಂತೆ ಮಾಡಿದೆ” ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮಂಗಳವಾರ ಹೇಳಿದ್ದಾರೆ.

“ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ನಂತರ ಕುಮಾರ್ ಅವರಿಗೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂದೆ(ಮಾಜಿ ಮುಖ್ಯಮಂತ್ರಿ) ಅವರಿಗಾದ ಸ್ಥಿತಿ ಬರಲಿದೆ. ಶಿಂದೆ ಅವರು ಬಿಜೆಪಿಯ ದೇವೇಂದ್ರ ಫಡ್ನವೀಸ್‌ಗೆ(ಮಹಾರಾಷ್ಟ್ರ ಸಿಎಂ) ದಾರಿ ಮಾಡಿಕೊಡಬೇಕಾಯಿತು. ಇದೇ ಗತಿ ನಿತೀಶ್ ಅವರಿಗೆ ಬರಬಹುದು” ಎಂದು ಭವಿಷ್ಯ ನುಡಿದರು.

ಇದನ್ನು ಓದಿದ್ದೀರಾ? ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ‌ಕರ್ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧನಕರ್ ಅವರ ರಾಜೀನಾಮೆಯು ನಿತೀಶ್ ಕುಮಾರ್ ಅವರನ್ನು ಬಿಜೆಪಿ ಬೆಂಬಲಿಸುತ್ತಲೇ ಇರಲು ಯಾವ ಒತ್ತಡವಿದೆ ಎಂಬ ಪ್ರಶ್ನೆ ಹುಟ್ಟಿಸಿದೆ” ಎಂದೂ ಹೇಳಿದರು.

74 ವರ್ಷದ ಧನಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದರು. ಈ ವಯಸ್ಸಿನ ವಿಚಾರವನ್ನೂ ಆರ್‌ಜೆಡಿ ನಾಯಕರು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ಈ ಬಗ್ಗೆ ಹೇಳಿಕೆ ನೀಡಿದ ಆರ್‌ಜೆಡಿ ನಾಯಕ ಅಖ್ತರುಲ್ ಇಸ್ಲಾಂ ಶಾಹಿನ್, “ನಿತೀಶ್ ಕುಮಾರ್ ಅವರನ್ನು ರಾಜಕೀಯವಾಗಿ ಅಪ್ರಸ್ತುತ ಹುದ್ದೆಗೆ ನೇಮಿಸುವ ಮೂಲಲ ಬಿಜೆಪಿ ನಿತೀಶ್ ಕುಮಾರ್ ಅವರನ್ನು ರಾಜಕೀಯವಾಗಿ ದೂರವಿಡಲು ಪಿತೂರಿ ನಡೆಸುತ್ತಿದೆ” ಎಂದು ಆರೋಪಿಸಿದ್ದರು.

ಇನ್ನು ಕೆಲವು ವರ್ಷಗಳ ಹಿಂದೆ ನಿತೀಶ್ ಕುಮಾರ್ ಅವರು ರಾಷ್ಟ್ರಪತಿ ಹುದ್ದೆಗೆ ಕಣ್ಣಿಟ್ಟಿದ್ದರು ಎಂದು ದಿವಂಗತ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಹೇಳಿದ್ದರು. ನಿತೀಶ್ ಪ್ರಸ್ತಾಪವನ್ನು ಬಿಜೆಪಿ ನಿರಾಕರಿಸಿದ್ದಕ್ಕೆ ಅವರು ಎನ್‌ಡಿಎ ಕೂಟದಿಂದ ಹೊರನಡೆದಿದ್ದರು, ಇದರಿಂದಾಗಿ ಸರ್ಕಾರವೇ ಪತನಗೊಂಡಿದೆ ಎಂದೂ ಹೇಳಿದ್ದರು.

ಆದರೆ ಆರ್‌ಜೆಡಿ ನಾಯಕ ಇಸ್ಲಾಂ ಶಾಹಿನ್‌ಗಿಂತ ಕೊಂಚ ಭಿನ್ನ ಹೇಳಿಕೆಯನ್ನು ಯಾದವ್ ನೀಡಿದ್ದಾರೆ. “ಒಂದು ಹಂತದಲ್ಲಿ ಕುಮಾರ್ ಅವರನ್ನು ಕೈಬಿಡಬೇಕು ಎಂಬುದು ಬಿಜೆಪಿಯ ಮನಸ್ಸಿನಲ್ಲಿದೆ. ಅದಕ್ಕಾಗಿಯೇ ಅಮಿತ್ ಶಾ ಇತ್ತೀಚೆಗೆ ನಿತೀಶ್ ಕುಮಾರ್ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಆದರೆ ಎನ್‌ಡಿಎ ಅಧಿಕಾರವನ್ನು ಉಳಿಸಿಕೊಂಡರೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಲಕ್ರಮೇಣ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...